ಮಂಗಳೂರು:ಪಕ್ಷ ತೆಗೆದುಕೊಂಡಿರುವ ತೀರ್ಮಾನವನ್ನು ಸ್ವಾಗತಿಸುತ್ತೇನೆ ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಬಳಿಕ
ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಪ್ರತಿಕ್ರಿಯಿಸಿದ್ದಾರೆ.ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಬ್ರಿಜೇಟ್ ಚೌಟಾಗೆ
ಅಭಿನಂದನೆ ಸಲ್ಲಿಸುತ್ತೇನೆ. ಕಳೆದ 15 ವರ್ಷಗಳಿಂದ ಪಕ್ಷ ನನಗೆ ಅವಕಾಶವನ್ನ ಕೊಟ್ಟಿದೆ. ಮತದಾರರು 15 ವರ್ಷಗಳಿಂದ ಆಶೀರ್ವಾದ ಮಾಡಿದ್ದಾರೆ. ರಾಜಕಾರಣಕ್ಕೆ ಯುವಕರು ಬರಬೇಕು. ಪಕ್ಷ ತೆಗೆದುಕೊಂಡಿರುವ ತೀರ್ಮಾನವನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.
ರಾಜ್ಯ ಘಟಕದ ಅಧ್ಯಕ್ಷನಾಗಿ ಕೆಲಸ ಮಾಡುವ ಅವಕಾಶ ಕೊಟ್ಟಿದೆ. ಪಕ್ಷದ ರಾಜ್ಯಾಧ್ಯಕ್ಷನಾಗಿ ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ಪಕ್ಷ ಏನು ಹೇಳುತ್ತೋ ಅದನ್ನ ಮಾಡುವವನು ನಾನು. ನನಗೆ ಕೊಟ್ಟ ಸಹಕಾರ ಕ್ಯಾ.ಬ್ರಿಜೇಶ್ ಚೌಟಾಗೆ ಕೊಡಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ನಳಿನ್ ಕುಮಾರ್ ಕಟೀಲು ಮನವಿ ಮಾಡಿದ್ದಾರೆ.









