ಬೆಂಗಳೂರು: ‘ಬೆಂಗಳೂರು ಕಂಬಳ ನಮ್ಮ ಕಂಬಳ’ಕ್ಕೆ ಚಾಲನೆ ದೊರೆತಿದೆ.ನಟ, ದಿವಂಗತ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ದೀಪ ಬೆಳಗಿಸಿ ಕಂಬಳಕ್ಕೆ ಚಾಲನೆ ನೀಡಿದರು. ಬಳಿಕ ಗಂಗಾರತಿ ಮಾಡುವ ಮೂಲಕ ಕಂಬಳ ಕರೆಗೆ ಪೂಜೆ ಸಲ್ಲಿಸಲಾಯಿತು.ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕಂಬಳ ಸಮಿತಿ

ಅಧ್ಯಕ್ಷ, ಪುತ್ತೂರು ಶಾಸಕ ಆಶೋಕ್ ಕುಮಾರ್ ರೈ, ಶಾಸಕ ಗುರ್ಮೆ ಪ್ರಕಾಶ್ ಶೆಟ್ಟಿ ಸೇರಿದಂತೆ ಅನೇಕರು ಗಂಗಾರತಿಯಲ್ಲಿ ಭಾಗವಹಿಸಿದ್ದರು. ನವೆಂಬರ್ 25 ಮತ್ತು 26 ರಂದು ರಾಜ್ಯ ರಾಜಧಾನಿ ಕಂಬಳ ಉತ್ಸವ ಭರ್ಜರಿಯಿಂದ ನಡೆಯಲಿದೆ. ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ನಡೆಯುವ ಕರಾವಳಿಯ ಕಂಬಳಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯಾತಿ ಗಣ್ಯರು, ಲಕ್ಷಾಂತರ ಮಂದಿ ಪ್ರೇಕ್ಷಕರು ಭಾಗವಹಿಸಲಿದ್ದಾರೆ.
ಬಾರಿ ವಿಜೃಂಭಣೆಯಿಂದ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಭರ್ಜರಿ ಸಿದ್ಧತೆ ಮಾಡಲಾಗಿದೆ. 200 ಕೋಣಗಳು ಭಾಗಿಯಾಗಲಿವೆ. ಕಂಬಳದಲ್ಲಿ ವಿಜೇತರಾಗುವ ಕೋಣದ ಮಾಲೀಕರಿಗೆ 1 ಲಕ್ಷ ರೂ. ನಗದು, 16 ಗ್ರಾಂ ಸ್ವರ್ಣ ಕೊಡಲಾಗುತ್ತದೆ. ದ್ವಿತೀಯ ಸ್ಥಾನ ಗಳಿಸಿದವರಿಗೆ 50,000 ರೂ. ಜತೆಗೆ 2.8 ಗ್ರಾಂ ಚಿನ್ನ ಮತ್ತು ತೃತೀಯ ಸ್ಥಾನ ಪಡೆದವರಿಗೆ 25,000 ರೂ. ನಗದು ಹಾಗೂ 4 ಗ್ರಾಂ ಬಂಗಾರದ ಪದಕವನ್ನು ಬಹುಮಾನವಾಗಿ ನೀಡಲಾಗುತ್ತದೆ.









