ಕಡಬ:ಹೆಚ್.ಎಂ. ನಂದಕುಮಾರ್ ಅವರಿಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿರುವುದಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಟಿಕೆಟ್ ಆಕಾಂಕ್ಷಿಯಾಗಿದ್ದ ನಂದಕುಮಾರ್ ಅಭಿಮಾನಿಗಳಾದ ಕಾಂಗ್ರೆಸ್ ಕಾರ್ಯಕರ್ತರು ಕಡಬದಲ್ಲಿಯೂ ಸಭೆ ನಡೆಸಿದ್ದಾರೆ.ಕಡಬದ ಅನುಗ್ರಹ ಸಭಾ ಭವನದಲ್ಲಿ ನಡೆದ ಸಭೆಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು
ಭಾಗವಹಿಸಿದ್ದರು. ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಯಾಗಿದ್ದ ನಂದಕುಮಾರ್ ಕಳೆದ ಹಲವು ಸಮಯಗಳಿಂದ ಕ್ಷೇತ್ರದ ಉದ್ದಗಲಕ್ಕೂ ಸಂಚರಿಸಿ ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸಿರುವುದರಿಂದ ನಂದಕುಮಾರ್ ಅವರಿಗೆ ಟಿಕೆಟ್ ನೀಡಬೇಕೆಂದು ಅಭಿಮಾನಿಗಳು ಆಗ್ರಹಿಸಿದ್ದಾರೆ. ನಂದಕುಮಾರ್ ಅವರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿ ಸುಳ್ಯ ಹಾಗೂ ಕಡಬ ತಾಲೂಕಿನಿಂದ 500 ಮಂದಿ ಕಾರ್ಯಕರ್ತರು ಬೆಂಗಳೂರಿಗೆ ತೆರಳಿ ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್, ಸಿದ್ಧರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆಯರವನ್ನು ಭೇಟಿ ಮಾಡುವುದಾಗಿ ನಿರ್ಧರಿಸಲಾಯಿತು.
ಕಾರ್ಯಕ್ರಮದಲ್ಲಿ ಕಡಬ ಬ್ಲಾಕ್ ಮಾಜಿ ಅಧ್ಯಕ್ಷರಾದ ಬಾಲಕೃಷ್ಣ ಬಳ್ಳೇರಿ, ಗಣೇಶ್ ಕೈಕುರೆ, ವಿಜಯ ಕುಮಾರ್ ರೈ, ತಾ.ಪಂ. ಮಾಜಿ ಸದಸ್ಯೆಯರಾದ ಆಶಾ ಲಕ್ಷಣ್, ಉಷಾ ಅಂಚನ್, ಪ್ರಮುಖರಾದ ಗೋಪಾಲಕೃಷ್ಣ ಭಟ್, ಅನಿಲ್, ಜಗನ್ನಾಥ ಪೂಜಾರಿ, ಗೋಕುಲ್ ದಾಸ್, ಭವಾನಿಶಂಕರ ಕಲ್ಮಡ್ಕ, ಸಚಿನ್ರಾಜ್ ಶೆಟ್ಟಿ ಪೆರುವಾಜೆ, ಸಿ.ಜೆ.ಸೈಮನ್, ರಮೇಶ್ ಕೋಟೆ ಎಣ್ಮೂರು, ಇಸ್ಮಾಯಿಲ್ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.