ಸುಳ್ಯ:ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯನ್ನು ಮರು ಪರಿಶೀಲನೆ ಮಾಡಬೇಕು, ಕೆಪಿಸಿಸಿ ಸದಸ್ಯ ಹೆಚ್.ಎಂ.ನಂದಕುಮಾರ್ ಅವರಿಗೆ ಸುಳ್ಯ ಕ್ಷೇತ್ರದ ಕಾಂಗ್ರೆಸ್ ನೀಡಬೇಕು ಎಂದು ಒತ್ತಾಯಿಸಿ ನಂದಕುಮಾರ್ ಅಭಿಮಾನಿ ಕಾಂಗ್ರೆಸ್ ಕಾರ್ಯಕರ್ತರು ಮಾ.29 ರಂದು ಜಿಲ್ಲಾ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಲಿದ್ದಾರೆ. ಹೆಚ್ ಎಂ ನಂದಕುಮಾರ್ ಅವರಿಗೆ

ಸುಳ್ಯ ಕ್ಷೇತ್ರದಿಂದ ಸ್ಪರ್ದಿಸಲು ಟಿಕೆಟ್ ಕೈ ತಪ್ಪಿರುವ ಹಿನ್ನಲೆಯಲ್ಲಿ ನಂದಕುಮಾರ್ ಅಭಿಮಾನಿಗಳಾದ ಕಾಂಗ್ರೆಸ್ ಕಾರ್ಯಕರ್ತರು ಮಾ.26ರಂದು ಸುಳ್ಯ ಮತ್ತು ಕಡಬದಲ್ಲಿ ಸಭೆ ಸೇರಿ ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಲು ನಿರ್ಧರಿಸಿತ್ತು. ಇದಕ್ಕೆ ಮುಂಚಿತವಾಗಿ ಮಾ.29ರಂದು ಬುಧವಾರ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ತೆರಳಿ ನಾಯಕರ ಮುಂದೆ ಬೇಡಿಕೆ ಇರಿಸಿ ಒತ್ತಾಯಿಸಲಿದ್ದಾರೆ. ಬಳಿಕ ರಾಜ್ಯ ನಾಯಕರನ್ನು ಭೇಟಿ ಮಾಡಲಾಗುವುದು ಎಂದು ನಂದಕುಮಾರ್ ಅಭಿಮಾನಿ ಬಳಗ ಪ್ರಕಟಣೆಯಲ್ಲಿ ತಿಳಿಸಿದೆ.