ಸುಳ್ಯ: ಕೆಪಿಸಿಸಿ ಸದಸ್ಯ ಹೆಚ್.ಎಂ.ನಂದಕುಮಾರ್ ಅವರಿಗೆ ಕೆಪಿಸಿಸಿ ಕೊಡಗು ಜಿಲ್ಲಾ ಉಸ್ತುವಾರಿ ನೀಡಿದೆ. ಕೊಡಗು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಘಟಕಗಳಾದ ಎನ್ಎಸ್ಯುಐ, ಯುವ ಕಾಂಗ್ರೆಸ್, ಮಹಿಳಾ ಘಟಕಗಳನ್ನು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರೀಯವಾಗಿ ತೊಡಗಿಸುವ ಜವಾಬ್ದಾರಿಯನ್ನು ನಂದಕುಮಾರ್ ಅವರಿಗೆ ನೀಡಿದೆ ಎಂದು ತಿಳಿದು ಬಂದಿದೆ. ಸುಳ್ಯ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ನಂದಕುಮಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿರುವ ಹಿನ್ನಲೆಯಲ್ಲಿ ಅವರು ಪಕ್ಷೇತರರಾಗಿ ಸ್ಪರ್ಧಿಸಲು ಅವರ ಬೆಂಬಲಿಗರಾದ ಕಾಂಗ್ರೆಸ್ ಕಾರ್ಯಕರ್ತರು ಒತ್ತಡ ಹೇರಿದ್ದರು. ಆದರೆ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.