ಸುಳ್ಯ:ಸುಳ್ಯ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಭಾವನೆಗಳಿಗೆ ಜಿಲ್ಲೆಯ ಕಾಂಗ್ರೆಸ್ ನಾಯಕರು ಹಾಗು ಹೈಕಮಾಂಡ್ ಬೆಲೆ ಕೊಟ್ಟಿಲ್ಲ. ಜಿಲ್ಲೆಯ ಕೆಲವು ನಾಯಕರಿಗೆ, ಹೈಕಮಾಂಡ್ಗೆ ಸುಳ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು ಬೇಕಾಗಿಲ್ಲ ಎಂದು ಕೆಪಿಸಿಸಿ ಸದಸ್ಯ ಹೆಚ್.ಎಂ.ನಂದಕುಮಾರ್ ಹೇಳಿದ್ದಾರೆ. ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ
ಆಕಾಂಕ್ಷಿಯಾಗಿದ್ದ ನಂದಕುಮಾರ್ ಸುಳ್ಯ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕಾರ್ಯಕರ್ತರು ಹಾಗು ಸ್ನೇಹಿತರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ ಅವರು ಎಐಸಿಸಿ ಹಾಗು ಕೆಪಿಸಿಸಿ ನಡೆಸಿದ ಎಲ್ಲಾ ಸಮೀಕ್ಷೆಗಳಲ್ಲಿ ನನ್ನ ಹೆಸರು ಮುಂಚೂಣಿಯಲ್ಲಿತ್ತು. ಕಳೆದ 5-6 ವರ್ಷಗಳಿಂದ ಸುಳ್ಯ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ. ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಕಾರ್ಯಕರ್ತರ, ಜನರ ಒಲವು ಇತ್ತು. ಆದರೆ ಜಿಲ್ಲೆಯ ಕೆಲವು ಕಾಂಗ್ರೆಸ್ ಮುಖಂಡರು ಟಿಕೆಟ್ ತಪ್ಪಿಸಿದ್ದಾರೆ.ಅವರಿಗೆ ಸುಳ್ಯದಲ್ಲಿ ಕಾಂಗ್ರೆಸ್ ಗೆಲ್ಲಬಾರದು ಎಂಬ ನಿಲುವು ಇದ್ದ ಹಾಗೆ ಇದೆ ಎಂದು ಅವರು ಹೇಳಿದ್ದಾರೆ. ಕೆಲವೇ ದಿನಗಳಲ್ಲಿ ಮುಂದಿನ ರಾಜಕೀಯ ನಡೆಯ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.