ಸುಳ್ಯ:ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಅವರ 172 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು
ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫ ವಹಿಸಿದ್ದರು. ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ ಶಹೀದ್ ತೆಕ್ಕಿಲ್ ಉದ್ಘಾಟಿಸಿದರು. ತಹಶೀಲ್ದಾರ್, ತಾಲೂಕು ರಾಷ್ಟ್ರೀಯ ಹಬ್ಬಗಳ ಆಚಾರಣಾ ಸಮಿತಿ ಅಧ್ಯಕ್ಷೆ ಮಂಜುಳಾ ಎಂ, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಎಸ್.ಹರಗಿ, ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಕೃಷ್ಣಕುಮಾರ್, ಸ್ಥಾಪಕಾಧ್ಯಕ್ಷ ಜನಾರ್ಧನ ಪೂಜಾರಿ, ಪದಾಧಿಕಾರಿಗಳಾದ ಸೋಮನಾಥ ಪೂಜಾರಿ ಉಪಸ್ಥಿತರಿದ್ದರು.ತಾಲೂಕು ಕಚೇರಿಯ ಕಾರ್ತಿಕ್ ಸ್ವಾಗತಿಸಿ, ಉಪ ತಹಶೀಲ್ದಾರ್ ಚಂದ್ರಕಾಂತ್ ವಂದಿಸಿದರು.









