ಸುಳ್ಯ:ಕಾಂಗ್ರೆಸ್ ಸರಕಾರ ಜಾರಿಗೆ ತಂದ ಮಹಾತ್ಮಾ ಗಾಂಧೀ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೆಸರು ಹಾಗೂ ಯೋಜನೆಯಲ್ಲಿ ಬದಲಾವಣೆ ಮಾಡಿ, ರಾಜ್ಯ ಸರಕಾರಗಳ ಮೇಲೆ ಒತ್ತಡ ತಂದು ವಿಕೇಂದ್ರೀಕೃತ ಆಡಳಿತವನ್ನು ಬುಡಮೇಲು ಮಾಡುವ ಕೆಲಸಕ್ಕೆ ಕೇಂದ್ರ ಬಿಜೆಪಿ ಸರಕಾರ ಕೈ ಹಾಕಿದೆ ಎಂದು ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿ್ಲ್ ಹೇಳಿದ್ದಾರೆ.ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು
ಮನಮೋಹನ್ ಸಿಂಗ್ ನೇತೃತ್ವದ ಸರಕಾರ ಜಾರಿಗೆ ತಂದಿರುವ ಉದ್ಯೋಗ ಖಾತರಿ ಯೋಜನೆಯನ್ನು ಹೆಸರು ಬದಲಾವಣೆ ಮಾಡಿ ಯೋಜನೆಗಿದ್ದ ಮಹಾತ್ಮಾ ಗಾಂಧಿ ಅವರ ಹೆಸರನ್ನು ಹೆಸರು ಬದಲಾವಣೆ ಮಾಡಿರುವುದು ಖಂಡನೀಯ. ಅಲ್ಲದೇ ಈ ಬಗ್ಗೆ ಕರ್ನಾಟಕ ಸರಕಾರ ವಿಶೇಷ ಅಧಿವೇಶನ ಕರೆದು ಅದರ ಬಗ್ಗೆ ಚರ್ಚಿಸಿ ವಿರೋಧ ವ್ಯಕ್ತಪಡಿಸಲಿದೆ. ಕಾಂಗ್ರೆಸ್ ನೇತೃತ್ವದಲ್ಲಿ ರಾಜ್ಯ , ಜಿಲ್ಲೆ ,ತಾಲೂಕು, ಗ್ರಾಮಗಳಲ್ಲಿ ಸಂಘಟಿತ ಹೋರಾಟ ಹಾಗೂ ಜನಜಾಗೃತಿ ಕಾರ್ಯಕ್ರಮ ನಡೆಸಲಿದೆ ಎಂದು ಹೇಳಿದರು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೇಮಕಾತಿ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು ಶೀಘ್ರ ನೇಮಕ ಅಗುವ ಸಾಧ್ಯತೆ ಇದೆ ಎಂದರು.
ಸುದ್ದಿಗೋಷ್ಟಿಯಲ್ಲಿ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್ ಕೆ ಹನೀಫ್, ಪಟ್ಟಣ ಪಂಚಾಯತ್ ಮಾಜಿ ನಾಮನಿರ್ದೇಶಿತ ಸದಸ್ಯ ಸಿದ್ದೀಕ್ ಕೊಕ್ಕೊ, ತಾ.ಪಂ.ಮಾಜಿ ಸದಸ್ಯ ತೀರ್ಥರಾಮ ಜಾಲ್ಸೂರು ಉಪಸ್ಥಿತರಿದ್ದರು.












