ನವದೆಹಲಿ: ನರೇಂದ್ರ ಮೋದಿ ನಿರಂತರ ಪ್ರಧಾನಿಯಾಗಿ 12 ವರ್ಷ ಪೂರೈಸಿದ್ದು, ಭಾರತದ ಮಾಜಿ ಪ್ರಧಾನಿ ಜವಾಹರ್ ಲಾಲ್ ಅವರ ದಾಖಲೆಯನ್ನು ಸರಿಗಟ್ಟಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ನೆಹರೂ 4,398 ದಿನಗಳ ಕಾಲ ಪ್ರಧಾನಿಯಾಗಿದ್ದರೆ ಮೋದಿಯರು ಇಂದಿಗೆ ಆ ದಾಖಲೆಯನ್ನ ಮುರಿದು
4,399 ದಿನಗಳನ್ನು ಪೂರೈಸಿದ್ದಾರೆ.ಮೊದಲ ಬಾರಿಗೆ 2014 ಮೇ 26ರಂದು ಪ್ರಮಾಣವಚನ ಸ್ವೀಕರಿಸಿದ್ದ ನರೇಂದ್ರ ಮೋದಿಯವರು ಅಂದಿನಿಂದ ಇಂದಿನವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಎನ್ಡಿಎ ಸರ್ಕಾರ 12 ವರ್ಷಗಳನ್ನು ಪೂರೈಸುತ್ತಿದ್ದು, ಮತ್ತು ಪ್ರಧಾನಿ ಮೋದಿ ಅವರು ನೆಹರು ಅವರ ದೀರ್ಘಾವಧಿಯ ಅಧಿಕಾರಾವಧಿಯ ಸಾಧನೆಯನ್ನು ಮುರಿದಿರುವ ಈ ಸಮಯದಲ್ಲಿ ಇಂದು ಎನ್ಡಿಎ ನಾಯಕರು ಒಟ್ಟುಗೂಡಿ ಸಂಭ್ರಮಾಚರಣೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.ಸುದೀರ್ಘ 12 ವರ್ಷಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿರುವ ಮೋದಿಯವರನ್ನು ಹಲವಾರು ದೇಶದ ಮುಖ್ಯಸ್ಥರು ಅಭಿನಂದಿಸಿದ್ದಾರೆ.













