ಸುಳ್ಯ:ಬಿಜೆಪಿ ಮಹಿಳಾ ಮೋರ್ಚಾ ಸುಳ್ಯ ಮಂಡಲ ಸಮಿತಿ ವತಿಯಿಂದ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ನಾರಿಶಕ್ತಿ ಸಮಾವೇಶ ಅಲಂಕಾರು ದೀನ್ದಯಾಳ್ ಸಭಾಭವನದಲ್ಲಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾತನಾಡಿದರು.ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್ ಅಧ್ಯಕ್ಷತೆ ವಹಿಸಿದ್ದರು.ಲೋಕಸಭಾ ಚುನಾವಣೆಯ
ರಾಜ್ಯ ಸಹ ಸಂಚಾಲಕರಾದ ಭಾರತಿ ಶೆಟ್ಟಿ, ಚುನಾವಣಾ ಸಂಚಾಲಕರಾದ ಕಸ್ತೂರಿ ಪಂಜ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಮಹಿಳಾ ಮೋರ್ಚಾ ಮಂಡಲ ಸಮಿತಿ ಅಧ್ಯಕ್ಷೆ ಇಂದಿರಾ ಬಿ.ಕೆ, ಪ್ರಮುಖರಾದ ಅಪ್ಪಯ್ಯ ಮಣಿಯಾಣಿ, ರವೀಂದ್ರ ಶೆಟ್ಟಿ ಉಳಿದೊಟ್ಟು,ಎ.ವಿ.ತೀರ್ಥರಾಮ, ಜಿ.ಪಂ.ಮಾಜಿ ಸದಸ್ಯೆ ಆಶಾ ತಿಮ್ಮಪ್ಪ,ಸುಳ್ಯ ಮಂಡಲ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಶುಭದಾ ಎಸ್. ರೈ, ಪ್ರಧಾನ ಕಾರ್ಯದರ್ಶಿಗಳಾದ ಶಶಿಕಲಾ ಎ,ಲೋಲಾಕ್ಷಿ ಕಾರ್ಯದರ್ಶಿಗಳಾದ ತೇಜಸ್ವಿನಿ ಕಟ್ಟಪುಣಿ, ಯಶೋಧಾ ಬಾಳೆಗುಡ್ಡೆ, ಜಿಲ್ಲಾ ಉಪಾಧ್ಯಕ್ಷೆ ಗುಣವತಿ ಕೊಲ್ಲಂತ್ತಡ್ಕ, ಜಾಹ್ನವಿ ಕಾಂಚೋಡು, ಗಂಗಾರತ್ನ ಪೆರಾಬೆ, ಯಶಸ್ವಿನಿ ಶಾಸ್ತ್ರಿ, ಸುಮಾ ಶೆಟ್ಟಿ, ಅಮಿತಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.







