ಸುಳ್ಯ:ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 30 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ಮಾ.31ರಂದು ನಿವೃತ್ತರಾದ ನಟರಾಜ್ ಎಂ.ಎಸ್. ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಎ.9ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಸಾರ್ವಜನಿಕ ಅಭಿನಂದನಾ ಸಮಾರಂಭದ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ಅಧ್ಯಕ್ಷತೆ ವಹಿಸಿದ್ದರು.ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ಡಾ.ನಟರಾಜ ಎಂ.ಎಸ್. ಅವರನ್ನು ಸನ್ಮಾನಿಸಿ ಅಭಿನಂದಿಸಿದರು.ನಗರ
ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ಮುಸ್ತಫಾ ಅಭಿನಂದನಾ ಭಾಷಣ ಮಾಡಿ ಸುಳ್ಯದ ಕ್ರೀಡಾ ಕ್ಷೇತ್ರದಲ್ಲಿ ಹೊಸ ಅಧ್ಯಾಯವನ್ನು ತೆರೆದವರು ನಟರಾಜರು. ಹಲವಾರು ಕ್ರೀಡಾ ಪ್ರತಿಭೆಗಳನ್ನು ಬೆಳೆಸಿದ ಅವರು ತಮ್ಮ ವೃತ್ತಿ ಜೀವನದ ಮೂಲಕ ದೊಡ್ಡ ಸಂದೇಶ ನೀಡಿದ್ದಾರೆ ಎಂದರು.ಶಿಸ್ತು ಮತ್ತು ಬದ್ಧತೆಯಿಂದ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.
ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ,ಕಾಲೇಜಿನ ಪ್ರಾಂಶುಪಾಲ ಮೋಹನ್ ಗೌಡ ಬೊಮ್ಮೆಟ್ಟಿ, ಉಪ ಪ್ರಾಂಶುಪಾಲರಾದ ಪ್ರಕಾಶ್ ಮೂಡಿತ್ತಾಯ, ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಭಟ್ ಕೊಡೆಂಕಿರಿ, ನಿವೃತ್ತ ಉಪನ್ಯಾಸಕ ಲಿಂಗಪ್ಪ ಗೌಡ ಕೇರ್ಪಳ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ರಾಜೇಶ್ವರಿ ಕಾಡುತೋಟ,ನ.ಪಂ. ಸದಸ್ಯರುಗಳಾದ

ಡೇವಿಡ್ ಧೀರಾ ಕ್ರಾಸ್ತ, ಎಂ.ವೆಂಕಪ್ಪ ಗೌಡ, ಶರೀಫ್ ಕಂಠಿ, ರಿಯಾಝ್ ಕಟ್ಟೆಕ್ಕಾರ್, ಸಿದ್ದಿಕ್ ಕೊಕ್ಕೊ, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ನಿತಿನ್ ಪ್ರಭು, ಜನಾರ್ದನ ಮಾಸ್ತರ್ ಗಣಿತ ಅಧ್ಯಯನ ಕೇಂದ್ರದ ಡಾ.ಜ್ಞಾನೇಶ್ ಎನ್.ಎ., ಸುಳ್ಯ ಎಸ್.ಐ.ಸಂತೋಷ್ ಕುಮಾರ್, ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಟರಾಜ ಎಂ.ಎಸ್. ಅವರರನ್ನು ಪೇಟ, ಹಾರ, ಫಲ ತಾಂಬೂಲ, ನೆನಪಿನ ಕಾಣಿಕೆಯಾಗಿ ಚಿನ್ನದ ಪದಕವನ್ನು ನೀಡಿ ಗೌರವಿಸಲಾಯಿತು. ವಿವಿಧ ಸಂಘ ಸಂಸ್ಥೆಗಳವರು, ವಿದ್ಯಾರ್ಥಿಗಳು ಸೇರಿದಂತೆ ಹಲವರು ಗೌರವಿಸಿದರು.
ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪೂಜಾಶ್ರೀ ಪ್ರಾರ್ಥನೆ ಹಾಡಿದರು. ಶಿಕ್ಷಕಿ ಚಂದ್ರಮತಿ ಕಾರ್ಯಕ್ರಮ ನಿರೂಪಿಸಿದರು. ಸಮಾರಂಭಕ್ಕೂ ಮುನ್ನ ಮೆರವಣಿಗೆ ಮೂಲಕ ಅವರನ್ನು ಕರೆ ತರಲಾಯಿತು.














