ಸುಳ್ಯ: ರೋಟರಿ ಕ್ಲಬ್ ಸುಳ್ಯ ವತಿಯಿಂದ ನೀಡುವ
ನೇಷನ್ ಬಿಲ್ಡರ್ ಅವಾರ್ಡ್ಗೆ 6 ಮಂದಿ ಶಿಕ್ಷಕರು ಆಯ್ಕೆಯಾಗಿದ್ದಾರೆ. ಶಿಕ್ಷಕರ ದಿನಾಚರಣೆಯ ಅಂಗವಾಗಿ ರೋಟರಿ ನೇಷನ್ ಬಿಲ್ಡರ್ ಅವಾರ್ಡ್ ನೀಡಲಾಗುತ್ತದೆ. ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರಕಾಶ್ ಮೂಡಿತಾಯ, ಸಂಪಾಜೆ
ಸರಕಾರಿ ಉನ್ನತೀಕರಿಸಿದ
ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಾವತಿ ಡಿ, ಶಾಂತಿನಗರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ತುಳಸಿ ಕೆ, ರೋಟರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಸರೋಜಾ ಎಂ ಟಿ, ರೋಟರಿ ಪೂರ್ವ ಪ್ರಾಥಮಿಕ ಶಾಲೆ ಸವಿತಾ ರಾಜೇಶ್, ರೋಟರಿ ಪ್ರೌಢಶಾಲೆ ಸಹ ಶಿಕ್ಷಕಿ ಉಷಾ ಕೆ ಇವರು ಆಯ್ಕೆಯಾಗಿದ್ದಾರೆ. ಸೆ.6ರಂದು ಸಂಜೆ 5.30ಕ್ಕೆ ರೋಟರಿ ಸಮುದಾಯ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾಬ ಮಾಡಲಾಗುವುದು ಎಂದು ರೋಟರಿ ಅಧ್ಯಕ್ಷ ಆನಂದ ಕಂಡಿಗ ಹಾಗೂ ಕಾರ್ಯದರ್ಶಿ ಕಸ್ತೂರಿ ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.