ಮಡಿಕೇರಿ: ಮಡಿಕೇರಿ -ಮಂಗಳೂರು ಹೆದ್ದಾರಿಯಲ್ಲಿ ಮದೆ ಸಮೀಪದ ಕರತೋಜಿ ಬಳಿ ಮಳೆಯಿಂದಾಗಿ ಬೃಹತ್ ಮರ ಹಾಗೂ ಮಣ್ಣು ಕುಸಿದು ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಅಧಿಕಾರಿಗಳು, ಸಿಬ್ಬಂದಿಗಳು ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿ ಸುಗಮ ಸಾರಿಗೆ ಸಂಚಾರ ಕಲ್ಪಿಸಲಾಯಿತು. ಇದೀಗ ಮಡಿಕೇರಿ – ಮಂಗಳೂರು ಹೆದ್ದಾರಿ ವಾಹನ ಸಂಚಾರಕ್ಕೆ ಮುಕ್ತ ವಾಗಿದೆ. ರಸ್ತೆ ತಡೆ ಉಂಟಾದ ಕಾರಣ ನೂರಾರು ವಾಹನಗಳು ಸಾಲುಗಟ್ಟಿ ನಿಂತಿತ್ತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.