ಸುಳ್ಯ:ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘ ಸುಳ್ಯ ಹಾಗೂ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಟ ಸಂಘಟನಾ ಸಮಿತಿಯ ಆಶ್ರಯದಲ್ಲಿ ರಾಷ್ಟ್ರೀಯ ಅಮೆಚೂರ್ ಕಬಡ್ಡಿ ಫೆಡರೇಷನ್ ಮತ್ತು ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಪುರುಷರ ಮತ್ತು ಮಹಿಳೆಯರ ಪ್ರೊ ಮಾದರಿಯ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಚಾಂಪಿಯನ್ಶಿಪ್ 2023 ನ.17ರಿಂದ 19ರ ತನಕ ಸುಳ್ಯದ ಚೆನ್ನಕೇಶವ ದೇವಸ್ಥಾನದ ಬಳಿಯ ಪ್ರಭು ಮೈದಾನದಲ್ಲಿ
ನಡೆಯಲಿದೆ. ಕಬಡ್ಡಿ ಪಂದ್ಯಾಟ ನಡೆಯುವ ಕ್ರೀಡಾಂಗಣಕ್ಜೆ ಫಾರ್ಮೆಡ್ ಗ್ರೂಫ್ನ ಉಪಾಧ್ಯಕ್ಷರು ಹಾಗೂ ಸಜ್ಜನ ಪ್ರತಿಷ್ಠಾನದ ಅಧ್ಯಕ್ಷ ಡಾ.ಉಮ್ಮರ್ ಬೀಜದಕಟ್ಟೆ ಭೇಟಿ ನೀಡಿದರು. ಸಿದ್ಧತೆಗಳ ಬಗ್ಗೆ ಸಮಿತಿಯ ಪದಾಧಿಕಾರಿಗಳ ಜೊತೆ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಿದರು. ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಉಪಾಧ್ಯಕ್ಷ ಪಿ.ಬಿ.ಸುಧಾಕರ ರೈ, ಜಿ.ಜಿ.ನಾಯಕ್,
ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಟ ಸಂಘಟನಾ ಸಮಿತಿಯ ಅಧ್ಯಕ್ಷ ಸಂಶುದ್ದೀನ್ ಜಿ.ಪಿ. ಭಾರತ್ ಶಾಮಿಯಾನ, ಕಾರ್ಯದರ್ಶಿ ಗುರುದತ್ ನಾಯಕ್, ಉಪಾಧ್ಯಕ್ಷ ಶಾಫಿ ಪ್ರಗತಿ, ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಶಿವಪ್ರಕಾಶ್, ಖಜಾಂಜಿ ಜಿ.ಎ.ಮಹಮ್ಮದ್, ಸಂಘಟನಾ ಸಮಿತಿಯ ಪದಾಧಿಕಾರಿಗಳಾದ ಅಬ್ದುಲ್ ರಝಾಕ್, ತೀರ್ಥೇಶ್, ಶಿವಪ್ರಸಾದ್, ಶ್ರೀಧರ, ರವಿ ಮತ್ತಿತರರು ಉಪಸ್ಥಿತರಿದ್ದರು.











