ಸುಳ್ಯ:ಸುಳ್ಯದಲ್ಲಿ ನಡೆಯುವ ಪ್ರೊ ಮಾದರಿಯ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದ ಉದ್ಘಾಟನೆಯ ಅಂಗವಾಗಿ ಸುಳ್ಯ ನಗರದಲ್ಲಿ ಆಕರ್ಷಕ ಮೆರವಣಿಗೆ ನಡೆಯಿತು. ನ.17 ರಿಂದ 19 ರ ತನಕ
ಪುರುಷರ ಮತ್ತು ಮಹಿಳೆಯರ ಪ್ರೊ ಮಾದರಿಯ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಚಾಂಪಿಯನ್ಶಿಪ್ ಸುಳ್ಯದ ಚೆನ್ನಕೇಶವ ದೇವಸ್ಥಾನದ ಸಮೀಪದ ಪ್ರಭು ಮೈದಾನದಲ್ಲಿ ವಿಶೇಷವಾಗಿ ತಯಾರಿಸಲಾದ

ಇಂಡೋರ್ ಸ್ಟೇಡಿಯಂನ ಮ್ಯಾಟ್ ಅಂಕಣದಲ್ಲಿ ನಡೆಯಲಿದೆ. ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘ ಸುಳ್ಯ ಹಾಗೂ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಟ ಸಂಘಟನಾ ಸಮಿತಿಯ ಆಶ್ರಯದಲ್ಲಿ ರಾಷ್ಟ್ರೀಯ ಅಮೆಚೂರ್ ಕಬಡ್ಡಿ ಫೆಡರೇಷನ್ ಮತ್ತು ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ 3 ದಿನಗಳ ಕಬಡ್ಡಿ ಉತ್ಸವ ನಡೆಯಲಿದೆ. ಆಟಗಾರರು, ಪ್ರಮುಖರು ಭಾಗವಹಿಸಿದ್ದರು. ಚೆಂಡೆ, ವಾದ್ಯ ಮೇಳಗಳು, ಬೊಂಬೆ ವೇಷಗಳು ಮೆರವಣಿಗೆಗೆ

ಮೆರುಗು ನೀಡಿತು. ಉದ್ಯಮಿ ಅಶ್ರಫ್ ಕಮ್ಮಾಡಿ ಮೆರವಣಿಗೆಗೆ ಚಾಲನೆ ನೀಡಿದರು.
ಕಬಡ್ಡಿ ಸಂಘಟನಾ ಸಮಿತಿಯ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು. ಸಂಘಟನಾ ಸಮಿತಿಯ ಅಧ್ಯಕ್ಷ ಸಂಶುದ್ದೀನ್ ಭಾರತ್ ಶಾಮಿಯಾನ, ಪದಾಧಿಕಾರಿಗಳಾದ ಜಿ.ಜಿ.ನಾಯಕ್, ಎಸ್.ಪಿ.ಲೋಕನಾಥ್, ಗುರುದತ್ ನಾಯಕ್, ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಶಿವಪ್ರಕಾಶ್ ಪದಾಧಿಕಾರಿಗಳಾದ ಜಿ.ಎ.ಮಹಮ್ಮದ್ ಕುಂಞಿ, ಶಾಫಿ ಪ್ರಗತಿ, ಪ್ರಮುಖರಾದ
ಕೆ.ಗೋಕುಲ್ದಾಸ್, ಟಿ.ಎಂ.ಶಹೀದ್ ತೆಕ್ಕಿಲ್, ಎಸ್.ಸಂಶುದ್ದೀನ್, ಕೆ.ಎಂ.ಮುಸ್ತಫ, ಅಬ್ದುಲ್ ಮಜೀದ್ ಜನತಾ, ಅಬೂಬಕ್ಕರ್ ಅಡ್ಕಾರ್, ನ.ಪಂ.ಸದಸ್ಯರಾದ ಶಿಲ್ಪಾ ಸುದೇವ್, ಕಿಶೋರಿ ಶೇಟ್ ಮತ್ತಿತರರು ಉಪಸ್ಥಿತರಿದ್ದರು.









