ಸುಳ್ಯ:ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘ ಸುಳ್ಯ ಹಾಗೂ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಟ ಸಂಘಟನಾ ಸಮಿತಿಯ ಆಶ್ರಯದಲ್ಲಿ ರಾಷ್ಟ್ರೀಯ ಅಮೆಚೂರ್ ಕಬಡ್ಡಿ ಫೆಡರೇಷನ್ ಮತ್ತು ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಪುರುಷರ ಮತ್ತು ಮಹಿಳೆಯರ ಪ್ರೊ ಮಾದರಿಯ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಚಾಂಪಿಯನ್ಶಿಪ್ 2023 ನ.17ರಿಂದ 19ರ ತನಕ ಸುಳ್ಯದ ಚೆನ್ನಕೇಶವ ದೇವಸ್ಥಾನದ ಬಳಿಯ
ಪ್ರಭು ಮೈದಾನದಲ್ಲಿ ನಡೆಯಲಿದೆ. ಇದರ ಪೂರ್ವಭಾವಿ ಸಭೆ ಕಬಡ್ಡಿ ಚಾಂಪಿಯನ್ಶಿಪ್ ಸಂಘಟನಾ ಸಮಿತಿಯ ಕಚೇರಿಯಲ್ಲಿ ನ.3ರಂದು ನಡೆಯಿತು. ಕಬಡ್ಡಿ ಸಂಘಟನಾ ಸಮಿತಿ ಪದಾಧಿಕಾರಿಗಳು ಹಾಗೂ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಕಬಡ್ಡಿ ಪಂದ್ಯಾಟಕ್ಕೆ ಸಿದ್ಧತೆಗಳು ಭರದಿಂದ ಸಾಗಿದ್ದು ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಿದರು. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಪದಾಧಿಕಾರಿಗಳು ಸಲಹೆ ಸೂಚನೆಗಳನ್ನು

ನೀಡಿದರು. ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ನ ಪ್ರಧಾನ ಕಾರ್ಯದರ್ಶಿ ರತನ್ ಶೆಟ್ಟಿ, ಉಪಾಧ್ಯಕ್ಷ ಪಿ.ಬಿ. ಸುಧಾಕರ ರೈ, ನಿರ್ದೇಶಕಾರಾದ ಚಂದ್ರಶೇಖರ ಕರ್ಣ, ಹರೀಶ್ ಆಳ್ವ, ರೋಹನ್ ತೊಕ್ಕೋಟ್ಟು, ಹಬೀಬ್ ಮಾಣಿ, ಸುಳ್ಯ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ನ ಸುಳ್ಯ ತಾಲೂಕು ಅಧ್ಯಕ್ಷ ಬಿ.ಕೆ.ಮಾಧವ, ವಾಲಿಬಾಲ್ ಅಸೋಸಿಯೇಷನ್ನ ರಾಜ್ಯ ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈ, ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ನ ಅಧ್ಯಕ್ಷ ದೊಡ್ಡಣ್ಣ ಬರೆಮೇಲು, ಜಿಲ್ಲಾ ರೆಫ್ರಿ ಬೋರ್ಡ್ ಚೆಯರ್ಮೆನ್ ಶಿವರಾಮ ಏನೆಕಲ್ಲು, ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಟ ಸಂಘಟನಾ ಸಮಿತಿಯ ಅಧ್ಯಕ್ಷ ಸಂಶುದ್ದೀನ್ ಜಿ.ಪಿ. ಭಾರತ್ ಶಾಮಿಯಾನ, ಕಾರ್ಯದರ್ಶಿ ಗುರುದತ್ ನಾಯಕ್, ಉಪಾಧ್ಯಕ್ಷ ಶಾಫಿ ಪ್ರಗತಿ, ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಶಿವಪ್ರಕಾಶ್, ಅಬ್ದುಲ್ ರಜಾಕ್ ಸ್ವಾಗತ್, ರಾಜು ಪಂಡಿತ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.









