ಸುಳ್ಯ:ಸುಳ್ಯದಲ್ಲಿ ನಡೆಯುತ್ತಿರುವ ಪ್ರೊ ಮಾದರಿಯ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದ ಎರಡನೇ ಪಂದ್ಯದಲ್ಲಿ ತಮಿಳುನಾಡಿನ ದೊರೈ ಸಿಂಗಂ ತಂಡ ಭರ್ಜರಿ ಗೆಲುವು ದಾಖಲಿಸಿದೆ.ಬಿರುಸಿನ ಪಂದ್ಯದಲ್ಲಿ ತಮಿಳುನಾಡಿನ ದೊರೈ ಸಿಂಗಂ ತಂಡ ಪಟ್ಲ ಪ್ರೆಂಡ್ಸ್ ಕಲ್ಲೆಗ ಮಂಗಳೂರು ತಂಡವನ್ನು 41-24 ಸ್ಕೋರ್ಗಳ ಅಂತರದಲ್ಲಿ ಪರಾಭವಗೊಳಿಸಿತು. ಭರ್ಜರಿ ಆಟದ ಮೂಲಕ ಅಂಕ ಗಳಿಸುತ್ತಾ ಸಾಗಿದ ದೊರೈ ಸಿಂಗಂ ತಂಡ ಉತ್ತಮ ದಾಳಿ ಮತ್ತು

ಹಿಡಿತಗಳ ಮೂಲಕ ಪಂದ್ಯದಲ್ಲಿ ಅಧಿಪತ್ಯ ಸಾಧಿಸಿತು.ಯುವಕರನ್ನು ಒಳಗೊಂಡ ಕರಾವಳಿಯ ತಂಡ ಕೊನೆಯಲ್ಲಿ ತೀವ್ರ ಪೈಪೋಟಿ ನೀಡಿದರೂ ಗೆಲುವು ಕೈ ಜಾರಿತು.
ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘ ಸುಳ್ಯ ಹಾಗೂ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಟ ಸಂಘಟನಾ ಸಮಿತಿಯ ಆಶ್ರಯದಲ್ಲಿ ರಾಷ್ಟ್ರೀಯ ಅಮೆಚೂರ್ ಕಬಡ್ಡಿ ಫೆಡರೇಷನ್ ಮತ್ತು ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ 3 ದಿನಗಳ ಪುರುಷರ ಮತ್ತು ಮಹಿಳೆಯರ ಪ್ರೊ ಮಾದರಿಯ ರಾಷ್ಟ್ರೀಯ ಎ ಗ್ರೇಡ್ ಮ್ಯಾಟ್ ಕಬಡ್ಡಿ ಚಾಂಪಿಯನ್ಶಿಪ್ ಸುಳ್ಯದ ಚೆನ್ನಕೇಶವ ದೇವಸ್ಥಾನದ ಸಮೀಪದ ಪ್ರಭು ಮೈದಾನದಲ್ಲಿ ವಿಶೇಷವಾಗಿ ತಯಾರಿಸಲಾದ ಇಂಡೋರ್ ಸ್ಟೇಡಿಯಂನ ಮ್ಯಾಟ್ ಅಂಕಣದಲ್ಲಿ ನಡೆಯುತಿದೆ.









