ಸುಳ್ಯ: ಸ್ನೇಹ ಸಂಗಮ ಯೋಗ ಬಳಗ ಬೆಂಗಳೂರು ಮತ್ತು ಭುವನ್ ರಾಜ್ ಫೌಂಡೇಶನ್ ಮೈಸೂರು ಇವರು ಜಂಟಿ ಆಶ್ರಯದಲ್ಲಿ ನಡೆಸಿದ ರಾಷ್ಟ್ರ ಮಟ್ಟದ ಮುಕ್ತ ರಾಷ್ಟ್ರೀಯ ಯೋಗಾಸನ ಚಾಂಪಿಯನ್ ಶಿಪ್ -2025ರಲ್ಲಿ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ
ಮೂರನೇ ತರಗತಿಯ ವಿದ್ಯಾರ್ಥಿ ಆಶ್ರಿತ್ ಎ ಸಿ ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾನೆ. ಇವರಿಗೆ ಶಾಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು ಜೆ ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನಿತ್ತು ಗೌರವಿಸಿದರು.ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಅಭಿನಂದಿಸಿದರು.