ಸುಳ್ಯ:ಸುಳ್ಯ ನೆಹರೂ ಸ್ಮಾರಕ ಪದವಿ ಕಾಲೇಜಿನ ನೇಚರ್ ಕ್ಲಬ್ ವತಿಯಿಂದ ನಾರ್ಕೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ಸಸ್ಯೋದ್ಯಾನ ನಿರ್ಮಾಣ ಮತ್ತು ಶ್ರಮದಾನ ಕಾರ್ಯಕ್ರಮ ನಡೆಯಿತು.ಗ್ರಾಮ ಪಂಚಾಯತ್ ಆಲೆಟ್ಟಿ, ಸಾಮಾಜಿಕ ಅರಣ್ಯ ಇಲಾಖೆ ಸುಳ್ಯ ವಲಯ, ಹಿರಿಯ ವಿದ್ಯಾರ್ಥಿ ಸಂಘ ಆಲೆಟ್ಟಿ ಶಾಲೆ, ವಿಕ್ರಮ ಯುವಕ ಮಂಡಲ ಬಾರ್ಪಣೆ, ಶಾಲಾಭಿವೃದ್ಧಿ ಸಮಿತಿ ಹಾಗೂ ಸ್ಥಳೀಯ ಸಂಘ
ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮವನ್ನು ಆಲೆಟ್ಟಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಕುಡೆಕಲ್ಲು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಇ. ರಮೇಶ್ ಮಾತನಾಡಿದರು.ಈ ಸಂದರ್ಭದಲ್ಲಿ ಭತ್ತದ ಕೃಷಿಕ ಶಿವರಾಮ ಗೌಡ ಕಲ್ಲೆಂಬಿ, ನಾಟಿ ವೈದ್ಯರಾದ ಲೋಲಜಾಕ್ಷ ಭೂತಕಲ್ಲು ಮತ್ತು ಕುಮಾರಿ ಕಲ್ಲೆಂಬಿ ಇವರನ್ನು ಎನ್ನೆಂಸಿ ನೇಚರ್ ಕ್ಲಬ್ ವತಿಯಿಂದ
ಸನ್ಮಾನಿಸಲಾಯಿತು. ಆಲೆಟ್ಟಿ ಗ್ರಾಮ ಪಂಚಾಯತ್ ಸದಸ್ಯ ಚಂದ್ರಕಾಂತ ನಾರ್ಕೋಡು ಸಭಾಧ್ಯಕ್ಷತೆ ವಹಿಸಿದ್ದರು. ನೆಹರೂ ಮೆಮೋರಿಯಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಬಾಲಚಂದ್ರ ಗೌಡ, ಕಾಲೇಜಿನ ಪ್ರಾಂಶುಪಾಲ ಪ್ರೊ. ರುದ್ರಕುಮಾರ್ ಎಂ ಎಂ, ಸುಳ್ಯ ಕ್ಷೇತ್ರ ಶಿಕ್ಷಣ ಸಂಯೋಜಕಿ ಸಂಧ್ಯಾಕುಮಾರಿ, ಶಾಲೆಯ ಮುಖ್ಯೋಪಾಧ್ಯಾಯಿನಿ ಪದ್ಮಾ ಡಿ ಉಪಸ್ಥಿತರಿದ್ದರು. ಎನ್ನೆಂಸಿ ಸಸ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಮತ್ತು ನೇಚರ್ ಕ್ಲಬ್ ಸಂಯೋಜಕ ಕುಲದೀಪ್ ಪೆಲ್ತಡ್ಕ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ನೇಚರ್ ಕ್ಲಬ್ ಸದಸ್ಯರಾದ ಚಂಪಾ ಮತ್ತು ಅರ್ಚನಾ ಪರಿಸರ ಗೀತೆ ಹಾಡಿದರು, ನೇಚರ್ ಕ್ಲಬ್ ಕಾರ್ಯದರ್ಶಿ ಶ್ರೇಯಾ ಕೆ ವಂದಿಸಿದರು. ಸುಪ್ರೀತಾ ಟಿ ಕೆ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕರಾದ ಅಕ್ಷತಾ, ಕೃತಿಕಾ, ಅಜಿತ್ ಕುಮಾರ್ ಮತ್ತು ಲ್ಯಾಬ್ ಸಹಾಯಕಿ ಭವ್ಯ ಹಾಗೂ ಆಲೆಟ್ಟಿ ಶಾಲಾ ಶಿಕ್ಷಕ ವೃಂದದವರು, ವಿಕ್ರಮ ಯುವಕ ಮಂಡಲದ ಅಧ್ಯಕ್ಷ ಪ್ರಶಾಂತ್ ಮತ್ತು ಬಳಗದವರು ಸಹಕರಿಸಿದರು.ಕಾಲೇಜಿನ ನೇಚರ್ ಕ್ಲಬ್ ಸದಸ್ಯರು ಶಾಲಾ ಆವರಣದಲ್ಲಿ ವಿವಿಧ ಜಾತಿಯ ಹಣ್ಣಿನ, ಗಿಡಗಳನ್ನು ನೆಟ್ಟರು.