ಸುಳ್ಯ: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ನವೀನ್ ಕುಮಾರ್ ರೈ ಅವರ ನಿಧನಕ್ಕೆ ಪ್ರಮುಖರು ಕಂಬನಿ ಮಿಡಿದಿದ್ದು ಸಂತಾಪ ಸೂಚಿಸಿದ್ದಾರೆ. ಮಾಜಿ ಸಚಿವ ಎಸ್.ಅಂಗಾರ, ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಪರವಾಗಿ ಅಧ್ಯಕ್ಷ ಪಿ.ಸಿ.ಜಯರಾಮ, ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ ಸಂಪಾಪ ಸೂಚಿಸಿದ್ದಾರೆ. ಸಾಮಾಜಿಕ, ರಾಜಕೀಯ, ಧಾರ್ಮಿಕ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದು ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿದ್ದ ನವೀನ್ ಕುಮಾರ್ ಮೇನಾಲ ಅವರ ಅಕಾಲಿಕ ಅಗಲುವಿಕೆ ಸಮಾಜಕ್ಕೆ ದೊಡ್ಡ ನಷ್ಟ ಎಂದು ಅವರು ಸಂತಾಪ ಸೂಚಿಸಿದ್ದಾರೆ.