ಮೇನಾಲ:ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡರಾಗಿದ್ದ ದಿ.ನವೀನ್ ರೈ ಮೇನಾಲ ಅವರ ನೆನಪಿನಲ್ಲಿ ಅವರ ಅಭಿಮಾನಿಗಳ ಬಳಗದ ವತಿಯಿಂದ ಮೇನಾಲದಲ್ಲಿ ನಿರ್ಮಿಸಿದ
ಪ್ರಯಾಣಿಕರ ತಂಗುದಾಣದ ಉದ್ಘಾಟನೆ ಮೇ.14ರಂದು ಪೂ.10ಕ್ಕೆ ನಡೆಯಲಿದೆ.ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಂಗುದಾಣವನ್ನು ಲೋಕಾರ್ಪಣೆ ಮಾಡುವರು.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಮತ್ತಿತರರು ಭಾಗವಹಿಸಲಿದ್ದಾರೆ ಎಂದು
ನವೀನ್ ರೈ ಅಭಿಮಾನಿ ಬಳಗದ ಸುಬೋದ್ ಶೆಟ್ಟಿ ಮೇನಾಲ ತಿಳಿಸಿದ್ದಾರೆ.













