ಸುಳ್ಯ: ಜಿ.ಪಂ. ಮಾಜಿ ಸದಸ್ಯ, ಬಿಜೆಪಿ ಮುಖಂಡ ನವೀನ್ ಕುಮಾರ್ ರೈ ಮೇನಾಲ ಅವರು ಹೊಳೆ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ತುದಿಯಡ್ಕ ಬಳಿ ಪಯಸ್ವಿನಿ ನದಿಗೆ ತನ್ನ ತೋಟಕ್ಕೆ ನೀರು ಸರಬರಾಜು
ಮಾಡುವ ಪಂಪ್ನ ಪುಟ್ ವಾಲ್ ರಿಪೇರಿಗೆಂದು ಇಳಿದಿದ್ದ ಸಂದರ್ಭ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೃತದೇಹವನ್ನು ಮೇಲೆತ್ತಲಾಗಿದೆ. ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಸಂದರ್ಭದಲ್ಲಿ ತನ್ನ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದ ನವೀನ್ ಕುಮಾರ್ ರೈ ಮೇನಾಲ ಬಿಜೆಪಿಯ ಪ್ರಭಾವೀ ಮುಖಂಡರಾಗಿದ್ದರು. ರಾಜಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದ ಅವರು ಜನಾನುರಾಗಿಯಾಗಿದ್ದರು.