ಸುಳ್ಯ:ಕೋಲ್ಚಾರ್ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿಯ ವಿದ್ಯಾರ್ಥಿನಿ ಬಹುಲಿಕಾ ರಾಮ್ ಜವಾಹರ್ ನವೋದಯ ಪರೀಕ್ಷೆಯಲ್ಲಿ ಹಾಗೂ ಸೈನಿಕ ಶಾಲೆಯ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಬಹುಲಿಕಾ ರಾಮ್ ಸುಳ್ಯ
ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸತೀಶ್ ಕೊಯಿಂಗಾಜೆ ಹಾಗೂ ಮರ್ಕಂಜ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಹಾಗೂ ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ವೀಣಾ ಎಂ.ಟಿ. ಅವರ ಪುತ್ರಿ. ಬಹುಲಿಕಾಳ ಹಿರಿಯ ಸಹೋದರಿ ಸೋಮಿಲಾ ರಾಮ್ ಜವಾಹರ್ ನವೋದಯ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿನಿ.