ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಮುಂಬರುವ ವಿಧಾನ ಸಭೆ ಚುನಾವಣಾ ಸಿದ್ಧತೆಯ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ವಿಕ್ರಮ್ ಅಮಟೆ ಅವರು ಸ್ಥಳೀಯ ಪೊಲೀಸ್ ಅಧಿಕಾರಿಗಳೊಂದಿಗೆ ನಕ್ಸಲ್ ಪೀಡಿತ ಪ್ರದೇಶದ ಮತ ಗಟ್ಟೆಗಳಾದ ಕೊಲ್ಲಮೊಗರು, ಕುಲ್ಕುಂದಗಳಿಗೆ ಭೇಟಿ ನೀಡಿ
ಪರಿಶೀಲನೆ ನಡೆಸಿದ್ದಾರೆ. ಚುನಾವಣಾ ಸೂಕ್ಷ್ಮ ಪ್ರದೇಶಗಳಾದ ಸುಬ್ರಮಣ್ಯ, ಕೊಂಬಾರುಗಳಿಗೆ ಭೇಟಿ ನೀಡಿ ಯೂಥ್ ಕಮಿಟಿ ಸಭೆಗಳನ್ನು ನಡೆಸಿ, ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಪೊಲೀಸ್ ಅಧೀಕ್ಷಕರಾದ ಡಾ.ವಿಕ್ರಮ್ ಅಮಟೆ ಸ್ಥಳೀಯ ಪೊಲೀಸ್ ಅಧಿಕಾರಿಗಳೊಂದಿಗೆ ಅಂತಾರಾಜ್ಯ ಗಡಿಯಲ್ಲಿರುವ ಪಾಣಾಜೆ, ಈಶ್ವರಮಂಗಲ ಗಳಲ್ಲಿರುವ ಅಂತಾರಾಜ್ಯ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಚುನಾವಣೆ ಕರ್ತವ್ಯಗಳ ಬಗ್ಗೆ ಸಲಹೆ ಹಾಗೂ ಮಾರ್ಗದರ್ಶನ ನೀಡಿ ಚೆಕ್ ಪೋಸ್ಟ್ ಗಳಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು.