ಸುಳ್ಯ:ದಕ್ಷಿಣ ಕನ್ನಡ ಮತ್ತು ಕೊಡಗಿನ ಗಡಿಭಾಗದಲ್ಲಿ ಕಾಡಂಚಿನ ಪ್ರದೇಶದಲ್ಲಿ ನಕ್ಸಲರು ಪ್ರತ್ಯಕ್ಷರಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ದಕ್ಷಿಣ ಕನ್ನಡ, ಕೊಡಗು ಗಡಿಭಾಗದ ಮಡಿಕೇರಿ ತಾಲೂಕು ಕಾಲೂರು ಗ್ರಾಮದ ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಕಾಣಿಸಿಕೊಂಡ ತಂಡವೊಂದು
ಕೂಜಿಮಲೆಯ ದಿನಸಿ ಅಂಗಡಿಯೊಂದರಿಂದ ದಿನಸಿಯನ್ನು ಖರೀದಿಸಿದ್ದಾರೆ ಎಂದು ಹೇಳಲಾಗಿದೆ. ಇವರು ನಕ್ಸಲರು ಆಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಗೆ ಈ ಪ್ರದೇಶ ಬರುತ್ತದೆ.ಕೆಲವು ವರ್ಷಗಳ ಹಿಂದೆ ಈ ಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು. ಇದೀಗ ತಂಡವೊಂದು ಕಾಣಿಸಿಕೊಂಡಿದ್ದು ನಕ್ಸಲರು ಆಗಿರಬಹುದು ಎಂಬ ಗುಮಾನಿ ಉಂಟಾಗಿದೆ.









