ಸುಳ್ಯ:ಸುಳ್ಯದ ಕೆ.ವಿ.ಜಿ. ಪಾಲಿಟೆಕ್ನಿಕ್ ಕಾಲೇಜಿನ ಎನ್.ಎಸ್.ಎಸ್. ಹಿರಿಯ ವಿದ್ಯಾರ್ಥಿಗಳ ಸಂಘ ಎನ್ಎಸ್ಎಸ್ ಸೇವಾ ಸಂಗಮ ಟ್ರಸ್ಟ್ ಹಾಗೂ ವಳಲಂಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಆಶ್ರಯದಲ್ಲಿ ಶಾಲಾ ವಾರ್ಷಿಕೋತ್ಸವ ಮತ್ತು ಸೇವಾ ಸಮ್ಮಿಲನದ ಅಂಗವಾಗಿ ವಳಲಂಬೆಯಲ್ಲಿ ರಾಜ್ಯಮಟ್ಟದ ನಾಯಕತ್ವ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಎನ್.ಎಸ್.ಎಸ್.ಸೇವಾ ಸಂಗಮ ಟ್ರಸ್ಟ್ನ ಗೌರವಾಧ್ಯಕ್ಷ ಬಾಲಕೃಷ್ಣ ಗೌಡ ಬೊಳ್ಳೂರು ಶಿಬಿರವವನ್ನು ಉದ್ಘಾಟಿಸಿದರು.ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ
ಪ್ರಾಂಶುಪಾಲ ಜಯಪ್ರಕಾಶ ಕೆ ಅಧ್ಯಕ್ಷತೆ ವಹಿಸಿದ್ದರು. ಎನ್ಎಸ್ಎಸ್ ಸೇವಾ ಸಂಗಮ ಟ್ರಸ್ಟ್ನ ಗೌರವ ಸಲಹೆಗಾರರಾದ ಚಂದ್ರಶೇಖರ ಬಿಳಿನೆಲೆ, ಸಲಹಾ ಸಮಿತಿ ಸದಸ್ಯೆ ಡಾ.ಅನುರಾಧಾ ಕುರುಂಜಿ, ವಳಲಂಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಪ್ರಮೀಳ ಪಿ.ಎಸ್., ಎಸ್ಡಿಎಂಸಿ ಅಧ್ಯಕ್ಷ ರವೀಶ್ ಕುಮಾರ್ ಮೊಟ್ಟೆಮನೆ, ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಸುನಿಲ್ಕುಮಾರ್ ಎನ್.ಪಿ,,ಎನ್ಎಸ್ಎಸ್ ಸೇವಾ ಸಂಗಮ ಟ್ರಸ್ಟ್ನ ಅಧ್ಯಕ್ಷ ವಿಜೇತ್ ಶಿರ್ಲಾಲ್, ಕಾರ್ಯಾಧ್ಯಕ್ಷ ರಕ್ಷಿತ್ ಬೊಳ್ಳೂರು, ಪ್ರಧಾನ ಕಾರ್ಯದರ್ಶಿ ವಿಶ್ವಕಿರಣ್ ಎಸ್.ಜಿ, ಖಜಾಂಚಿ ಹೇಮನಾಥ ಜಯನಗರ, ರಜನೀಶ್ ಗುಡ್ಡೆಮನೆ, ಸಂಘಟನಾ ಕಾರ್ಯದರ್ಶಿ ಸುಜಿತ್ ಎಂ.ಎಸ್, ಕಾರ್ಯದರ್ಶಿಗಳಾದ ಸುಶಾಂತ್ ಅಜ್ಜಿಕಲ್ಲು, ಸೌಜನ್ಯ ಕುತ್ಯಾಳ ಉಪಸ್ಥಿತರಿದ್ದರು. ಎನ್ಎಸ್ಎಸ್ ಸೇವಾ ಸಂಗಮ ಟ್ರಸ್ಟ್ನ ಗೌರವ ಸಲಹೆಗಾರರಾದ ಚಂದ್ರಶೇಖರ ಬಿಳಿನೆಲೆ, ಸಲಹಾ ಸಮಿತಿ ಸದಸ್ಯೆ ಡಾ.ಅನುರಾಧಾ ಕುರುಂಜಿ ನಾಯಕತ್ವದ ಕುರಿತು ತರಬೇತಿ ನೀಡಿದರು. ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು.









