ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ, ಎನ್ಡಿಎ ನಾಯಕರು ಮತ್ತು ನೂತನವಾಗಿ ಆಯ್ಕೆಯಾದ ಎಲ್ಲಾ ಸಂಸದರ ಉಪಸ್ಥಿತಿಯಲ್ಲಿ ಇಂದು ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ನಡೆದ ಎನ್ಡಿಎ ಸಂಸದೀಯ
ಸಭೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ-ಚಿಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭಾಗಿಯಾದರು. ಸಭೆ ಮೋದಿಯವರನ್ನು ಎನ್ಡಿಎ ಮೈತ್ರಿಕೂಟದ ನಾಯಕರಾಗಿ ಆಯ್ಕೆ ಮಾಡಲಾಯಿತು. ಕರ್ನಾಟಕದ ಎನ್ಡಿಎ ಸಂಸದರು ಭಾಗಿಯಾದರು.