ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಎನ್ಡಿಎ ನಾಯಕರಾಗಿ ಆಯ್ಕೆಯಾಗಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ನಡೆದ ಎನ್ಡಿಎ ನಾಯಕರ ಸಭೆಯಲ್ಲಿ ನರೇಂದ್ರ ಮೋದಿ ಅವರನ್ನು ನಾಯಕರಾಗಿ ಆಯ್ಕೆ ಮಾಡಲಾಯಿತು.ನರೇಂದ್ರ ಮೋದಿ ಅವರೇ ಪ್ರಧಾನಿಯಾಗಲಿದ್ದಾರೆ ಎಂದು ಎನ್ಡಿಎ ನಾಯಕರು ಹೇಳಿದ್ದಾರೆ. ನರೇಂದ್ರ ಮೋದಿ ನೇತೃತ್ವದಲ್ಲಿ
ರಾಷ್ಟ್ರಪತಿ ಅವರನ್ನು ಭೇಟಿ ಮಾಡಲಿರುವ ಎನ್ಡಿಎ ನಾಯಕರು ಸರ್ಕಾರ ರಚಿಸುವ ಹಕ್ಕು ಮಂಡಿಸಲಿದ್ದಾರೆ. ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಸೇರಿದಂತೆ ಎಲ್ಲಾ ಎನ್ಡಿಎ ಮುಖಂಡರು ನರೇಂದ್ರ ಮೋದಿ ನೇತೃತ್ವಕ್ಕೆ ಬೆಂಬಲ ಘೋಷಣೆ ಮಾಡಿವೆ.
ಜೂನ್ 8ರಂದು ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಿಡಿಪಿಯ ಚಂದ್ರಬಾಬು ನಾಯ್ಡು, ಜನಸೇನಾ ಪವನ್ ಕಲ್ಯಾಣ್, ಜೆಡಿಯು ನಿತೀಶ್ ಕುಮಾರ್, ಜೆಡಿಎಸ್ನ ಕುಮಾರಸ್ವಾಮಿ ಸೇರಿದಂತೆ ಸಭೆಯಲ್ಲಿ ಎನ್ಡಿಎ ಮೈತ್ರಿಕೂಟದ ಎಲ್ಲಾ ನಾಯಕರು ಭಾಗವಹಿಸಿದ್ದರು.