ಪ್ಯಾರಿಸ್: ಫ್ರಾನ್ಸ್ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದ ಜಾವೆಲಿನ್ ಥ್ರೋ ವಿಭಾಗದಲ್ಲಿ ಹಾಲಿ ಚಾಂಪಿಯನ್ ಭಾರತದ ನೀರಜ್ ಚೋಪ್ರಾ ಫೈನಲ್ಗೆ ಪ್ರವೇಶಿಸಿದ್ದಾರೆ.ಇಂದು ನಡೆದ ಪುರುಷರ ಜಾವೆಲಿನ್ ಥ್ರೋ ಅರ್ಹತಾ ಸುತ್ತಿನ ಸ್ಪರ್ಧೆಯಲ್ಲಿ ಮೊದಲ
ಎಸೆತದಲ್ಲಿಯೇ 89.34 ಮೀಟರ್ ಜಾವೆಲಿನ್ ಎಸೆದು ನೀರಜ್ ಅಮೋಘ ಸಾಧನೆ ಮಾಡಿದರು.ಇದು ಪ್ರಸಕ್ತ ಆವೃತ್ತಿಯಲ್ಲಿ ನೀರಜ್ ಅವರ ಶ್ರೇಷ್ಠ ಸಾಧನೆಯಾಗಿದೆ. ಆ ಮೂಲಕ ಮೂರು ವರ್ಷಗಳ ಹಿಂದೆ ಟೋಕಿಯೊ ಒಲಿಂಪಿಕ್ಸ್ನಲ್ಲಿ ಜಯಿಸಿದ್ದ ಚಿನ್ನದ ಪದಕವನ್ನು ಇಲ್ಲಿಯೂ ಉಳಿಸಿಕೊಳ್ಳುವ ಛಲದಲ್ಲಿದ್ದಾರೆ. ನೀರಜ್ ಚೋಪ್ರಾ ಅವರು, ಟೋಕಿಯೊ ಒಲಿಂಪಿಕ್ಸ್ನಲ್ಲಿ 87.58 ಮೀಟರ್ ಜಾವೆಲಿನ್ ಎಸೆದು ಚಿನ್ನ ಜಯಿಸಿದ್ದರು. ಆ ಮೂಲಕ ಒಲಿಂಪಿಕ್ಸ್ ಟ್ರ್ಯಾಕ್ ಮತ್ತು ಫೀಲ್ಡ್ ವಿಭಾಗದಲ್ಲಿ ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟುವೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.