ಸುಳ್ಯ:ದೇಶದ ಸ್ವಾತ್ರoತ್ಯ ಹೋರಾಟದಲ್ಲಿ ಭಾಗವಹಿಸಿದವರನ್ನು ಮುಂದಿನ ಜನಾಂಗಕ್ಕೆ ಪರಿಚಯಿಸಲು ಇಂತಹ ಆಚರಣೆಗಳು ಸಹಕಾರಿ
ತ್ಯಾಗ ಮನೋಭಾವನೆ ರಾಷ್ಟ್ರೀಯತೆಯ ಒಂದು ಭಾಗವಾಗಿದೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ.ಎಂ. ಮುಸ್ತಫ ಹೇಳಿದರು.ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ
ಭಾರತದ ಪ್ರಥಮ ಪ್ರಧಾನ ಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ರವರ ಜನ್ಮದಿನಾಚರಣೆ ಅಂಗವಾಗಿ ನಡೆದ ಸಮಾರಂಭದಲ್ಲಿ ಮಾತನಾಡಿದರು.
ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ. ಎಸ್. ಗಂಗಾಧರ ವಹಿಸಿದ್ದರು.ಸಮಾರಂಭದಲ್ಲಿ ಕೆಪಿಸಿಸಿ ಸಂಯೋಜಕ ಎಸ್. ಸಂಶುದ್ದೀನ್, ಬ್ಲಾಕ್ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಅಶೋಕ್ ಚೂಂತಾರು, ಇಂಟಕ್ ಘಟಕದ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ಜಿಲ್ಲಾ ಅಲ್ಪಸಂಖ್ಯಾತ ಘಟಕ ಕಾರ್ಯದರ್ಶಿ ಯೂಸುಫ್ ಅಂಜಿಕಾರ್, ಬ್ಲಾಕ್ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಜಿ.ಎಂ. ಇಬ್ರಾಹಿಂ ಶಿಲ್ಪಾ, ಬ್ಲಾಕ್ ಮೈನಾರಿಟಿ ಕಾಂಗ್ರೆಸ್ ಕಾರ್ಯದರ್ಶಿ ಶಹೀದ್ ಪಾರೆ ಉಪಸ್ಥಿರಿದ್ದರು.









