ಸುಳ್ಯ:ಸ್ವತoತ್ರ ಭಾರತದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಪುಣ್ಯ ತಿಥಿ ಅಂಗವಾಗಿ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪುಣ್ಯ ಸ್ಮರಣೆ ಕಾರ್ಯಕ್ರಮ ಜರಗಿತು.ಅಧ್ಯಕ್ಷತೆಯನ್ನು
ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ. ಎಸ್. ಗಂಗಾಧರ್ ವಹಿಸಿದ್ದರು
ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ. ಎಂ. ಮುಸ್ತಫ ಸಂಸ್ಮರಣಾ ಭಾಷಣ ಮಾಡಿದರು, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಭೂ ನ್ಯಾಯ ಮಂಡಳಿ ಸದಸ್ಯ ಪವಾಝ್ ಕನಕಮಜಲು, ಮುಖಂಡರಾದ ದಿನೇಶ್ ಅಂಬೆಕಲ್ಲು, ಭೋಜಪ್ಪ ನಾಯ್ಕ್ ಅಡ್ಕಾರು,ಗಂಗಾಧರ ಮೇನಾಲ ಮೊದಲಾದವರು ಉಪಸ್ಥಿತರಿದ್ದರು.





