ಪಂಜ:ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ
ಕಾರ್ಯನಿರ್ವಾಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ನೇಮಿರಾಜ್ ಪಲ್ಲೋಡಿ ದಂಪತಿಗಳಿಗೆ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ದೇಗುಲದ ಸಭಾಭವನದಲ್ಲಿ ನಡೆದ

ಸಮಾರಂಭದಲ್ಲಿ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಸನ್ಮಾನಿಸಿದರು. ವ್ಯವಸ್ಥಾಪನಾ ಸಮಿತಿಯ ಗೌರವ ಸಲಹೆಗಾರರಾದ ಪರಮೇಶ್ವರ ಬಿಳಿಮಲೆ, ಉಮೇಶ್ ಬುಡೆಂಗಿ ಬಳ್ಪ,
ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸತ್ಯನಾರಾಯಣ ಭಟ್ ಕಾಯಂಬಾಡಿ, ಧರ್ಮಪಾಲ ಮರಕ್ಕಡ, ಸಂತೋಷ್ ಕುಮಾರ್ ರೈ ಪಲ್ಲತ್ತಡ್ಕ, ಮಾಯಿಲಪ್ಪ ಗೌಡ ಎಣ್ಮೂರು, ಪವಿತ್ರ ಮಲ್ಲೆಟ್ಟಿ, ಮಾಲಿನಿ ಕುದ್ವ ಮತ್ತಿತರರು ಗೌರವಾರ್ಪಣೆ ಮಾಡಿದರು.











