ನವದೆಹಲಿ: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿದಂತೆ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮಂಗಳವಾರ ಬಂಧಿಸಿದೆ.
ರಿಯಾಜ್ ಯೂಸಫ್ ಎಂಬಾತ ಬಂಧಿತ ಆರೋಪಿ. ವಿದೇಶಕ್ಕೆ
ಪರಾರಿಯಾಗಲು ಯತ್ನಿಸುತ್ತಿದ್ದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು ಬಂಧಿತ ಆರೋಪಿಗಳ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಬಿಜೆಪಿ ಯುವಮೋರ್ಚಾ ಮುಖಂಡರಾಗಿದ್ದ ಪ್ರವೀಣ್ ನೆಟ್ಟಾರು ಅವರನ್ನು 2022 ಜುಲೈ 26 ರಂದು ರಾತ್ರಿ ಕೊಲೆ ಮಾಡಲಾಗಿತ್ತು. ಪ್ರಕರಣವನ್ನು ಆರಂಭದಲ್ಲಿ ಪೊಲೀಸ್ ತನಿಖೆ ನಡೆಸಿ ಬಳಿಕ ಎನ್ಐಎಗೆ ಹಸ್ತಾಂತರ ಮಾಡಲಾಗಿತ್ತು.









