ಬೆಂಗಳೂರು: ದ.ಕ.ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿಯ ಸಮಿತಿ ಸದಸ್ಯರಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕರಿಸಿರುವ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. ಜಾಮೀನು ಕೋರಿ ಪ್ರಕರಣಕ್ಕೆ
ಸಂಬಂಧಪಟ್ಟು ನ್ಯಾಯಾಂಗ ಬಂಧನದಲ್ಲಿರುವ ಕೆ.ಇಸ್ಮಾಯಿಲ್ ಶಫಿ, ಕೆ.ಮೊಹಮ್ಮದ್ ಇಕ್ಬಾಲ್ ಮತ್ತು ಎಂ.ಶಾಹೀದ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ನ್ಯಾಯಪೀಠ ಅರ್ಜಿ ತಿರಸ್ಕರಿಸಿ ಆದೇಶ ನೀಡಿದೆ ಎಂದು ತಿಳಿದು ಬಂದಿದೆ. 2022ರ ಜುಲೈ 26ರಂದು ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಲಾಗಿತ್ತು. ಆರಂಭದಲ್ಲಿ ಪೊಲೀಸ್ ಇಲಾಖೆ ನಡೆಸಿದ್ದ ತನಿಖೆಯನ್ನು ಬಳಿಕ ಎನ್ಐಎಗೆ ಹಸ್ತಾಂತರ ಮಾಡಲಾಗಿದೆ.