ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಲೋಕಭವನದಲ್ಲಿ ಸಂಜೆ 4.05ಕ್ಕೆ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ,
ಡಾ. ಜಿ. ಪರಮೇಶ್ವರ್, ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್
ಎಂ.ಬಿ. ಪಾಟೀಲ್, ರಾಮಲಿಂಗಾ ರೆಡ್ಡಿ,ಸತೀಶ ಜಾರಕಿಹೊಳಿ,ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ,ಯು.ಟಿ. ಖಾದರ್,ಈಶ್ವರ್ ಖಂಡ್ರೆ,ವಯತೀಂದ್ರ ಸಿದ್ದರಾಮಯ್ಯ,ಬೈರತಿ ಸುರೇಶ್,ಶರಣ ಪ್ರಕಾಶ ಪಾಟೀಲ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.














