ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ನೇಮಕವಾಗಿದ್ದಾರೆ. ಅವರು ಡಿಸೆಂಬರ್ 1 ರಿಂದ ಅಧಿಕಾರ ಸ್ವೀಕರಿಸಲಿದ್ದಾರೆ.
ಪ್ರಸ್ತುತ ರಜನೀಶ್ ಗೋಯಲ್ ಅವರು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. ಮುಖ್ಯ ಕಾರ್ಯದರ್ಶಿಯಾಗಿರುವ ವಂದಿತಾ ಶರ್ಮಾ ಅವರ ಕಾರ್ಯಾವಧಿ ಇದೇ ನವೆಂಬರ್ 30ಕ್ಕೆಕೊನೆಗೊಳ್ಳುತ್ತಿರುವುದರಿಂದ ಹೊಸ ಮುಖ್ಯ ಕಾರ್ಯದರ್ಶಿಯ ನೇಮಕ ಮಾಡಲಾಗಿದೆ.