ಮಂಗಳೂರು: ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಗಿಲನ್ ಎಂ.ಪಿ. ಜೂ.17ರ ಶನಿವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಎಂ.ಆರ್.ರವಿಕುಮಾರ್ ಅವರು ನೂತನ ಜಿಲ್ಲಾಧಿಕಾರಿಗೆ
ಅಧಿಕಾರ ಹಸ್ತಾಂತರ ಮಾಡಿದರು. ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯಕಾರಿ ನಿರ್ದೇಶಕರಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ದ.ಕ.ಜಿಲ್ಲಾಧಿಕಾರಿಯಾಗಿ ಸರಕಾರ ನೇಮಕ ಮಾಡಿದೆ.