ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟವನ್ನು ಶನಿವಾರ ವಿಸ್ತರಿಸಲಾಗಿದ್ದು, 24 ಶಾಸಕರು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಆ ಮೂಲಕ, ಸಚಿವ ಸಂಪುಟ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿ ಒಟ್ಟು 34 ಸಚಿವರಾಗಿದ್ದಾರೆ.ರಾಜಭವನದ ಗಾಜಿನ ಮನೆಯಲ್ಲಿ ಬೆಳಿಗ್ಗೆ 11.45ಕ್ಕೆ ನಡೆದ ಸರಳ ಸಮಾರಂಭದಲ್ಲಿ
ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾ ವಿಧಿ ಬೋಧಿಸಿದರು.ರಾಜ್ಯಪಾಲ ಥಾವರ್ಚಂದ್ ಗೆಹಲೋತ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ನೂತನ ಸಚಿವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.ಪ್ರಮಾಣವಚನ ಸ್ವೀಕರಿಸಿದವರು:
ಎಚ್.ಕೆ. ಪಾಟೀಲ, ಕೃಷ್ಣ ಭೈರೇಗೌಡ, ಚಲುವರಾಯಸ್ವಾಮಿ, ಕೆ. ವೆಂಕಟೇಶ್, ಡಾ. ಎಚ್.ಸಿ. ಮಹದೇವಪ್ಪ, ಈಶ್ವರ ಖಂಡ್ರೆ, ಕೆ.ಎನ್. ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ, ಆರ್.ಬಿ. ತಿಮ್ಮಾಪುರ, ಎಸ್.ಎಸ್. ಮಲ್ಲಿಕಾರ್ಜುನ, ಶಿವರಾಜ್ ತಂಗಡಗಿ, ಡಾ. ಶರಣಪ್ರಕಾಶ್ ಪಾಟೀಲ, ಮಂಕಾಳ ವೈದ್ಯ, ಲಕ್ಷ್ಮೀ ಹೆಬ್ಬಾಳ್ಕರ್, ರಹೀಂ ಖಾನ್, ಡಿ. ಸುಧಾಕರ್, ಸಂತೋಷ್ ಲಾಡ್, ಎನ್.ಎಸ್. ಬೋಸರಾಜ, ಭೈರತಿ ಸುರೇಶ್, ಮಧು ಬಂಗಾರಪ್ಪ, ಡಾ. ಎಂ.ಸಿ. ಸುಧಾಕರ್, ಬಿ. ನಾಗೇಂದ್ರ.
ಪ್ರಮಾಣ ವಚನ ಸ್ವೀಕರಿಸಿದರು.