ಮಂಗಳೂರು: ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಜಿಲ್ಲೆಯ 8 ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ. 2018 ರ ಚುನಾವಣೆಯಲ್ಲಿ ಬಿಜೆಪಿ 7 ಕ್ಷೇತ್ರದಲ್ಲಿ ಮತ್ತು ಕಾಂಗ್ರೆಸ್ 1 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಈ ಬಾರಿ ಪುತ್ತೂರಿನಲ್ಲಿ ಗೆಲ್ಲುವ ಮೂಲಕ ಕಾಂಗ್ರೆಸ್ ಸ್ಥಾನಗಳ ಸಂಖ್ಯೆ ಎರಡಕ್ಕೇರಿದೆ.
ಸುಳ್ಯ ಕ್ಷೇತ್ರದಿಂದ ಬಿಜೆಪಿಯ ಭಾಗೀರಥಿ ಮುರುಳ್ಯ ಪ್ರಥಮ ಬಾರಿಗೆ
ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಮಂಗಳೂರು ಕ್ಷೇತ್ರದಿಂದ ಕಾಂಗ್ರೆಸ್ನ ಯು.ಟಿ.ಖಾದರ್ 5ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಮಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ವೇದವ್ಯಾಸ ಕಾಮತ್,ಮಂಗಳೂರು ಉತ್ತರ ಕ್ಷೇತ್ರದಿಂದ ಡಾ.ಭರತ್ ಶೆಟ್ಟಿ, ಮೂಡಬಿದಿರೆ ಕ್ಷೇತ್ರದಿಂದ ಉಮಾನಾಥ ಕೋಟ್ಯಾನ್ ಬಂಟ್ವಾಳ ಕ್ಷೇತ್ರದಿಂದ ರಾಜೇಶ್ ನಾಯ್ಕ್ , ಬೆಳ್ತಂಗಡಿ ಕ್ಷೇತ್ರದಿಂದ ಹರೀಶ್ ಪೂಂಜಾ ಬಿಜೆಪಿ ಅಭ್ಯರ್ಥಿಗಳಾಗಿ ಸ್ಪರ್ಧಿಸಿ ಸತತ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್ನ ಅಶೋಕ್ ಕುಮಾರ್ ರೈ ಪ್ರಥಮ ಬಾರಿಗೆ ಆಯ್ಕೆಯಾದರು.
ಪ್ರಮುಖರಿಗೆ ಸೋಲು:
ಬಂಟ್ವಾಳ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ರಮಾನಾಥ ರೈ, ಸುಳ್ಯ ಕ್ಷೇತ್ರದಿಂದ ಸ್ಪರ್ಧಿಸಿದ ಜಿ.ಕೃಷ್ಣಪ್ಪ, ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಅರುಣ್ಕುಮಾರ್ ಪುತ್ತಿಲ, ಆಶಾ ತಿಮ್ಮಪ್ಪ, ದಿವ್ಯಪ್ರಭಾ ಚಿಲ್ತಡ್ಕ, ಬೆಳ್ತಂಗಡಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ರಕ್ಷಿತ್ ಶಿವರಾಂ, ಮಂಗಳೂರು ದಕ್ಷಿಣದಿಂದ ಸ್ಪರ್ಧಿಸಿದ್ದ ಜೆ.ಆರ್.ಲೋಬೋ, ಮಂಗಳೂರು ಉತ್ತರದಿಂದ ಕ್ಷೇತ್ರದಿಂದ ಸ್ಪರ್ಧಿಸಿದ್ದ ಇನಾಯತ್ ಆಲಿ, ಮೊಯ್ದೀನ್ ಬಾವಾ, ಮೂಡಬಿದ್ರೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಿಥುನ್ ರೈ, ಮಂಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಸತೀಶ್ ಕುಂಪಲ ಪರಾಜಿತರಾಗಿದ್ದಾರೆ.