ಸುಳ್ಯ: ಸುಳ್ಯ ನಗರಕ್ಕೆ ಕುಡಿಯುವ ನೀರಿನ ಯೋಜನೆಗೆ 58 ಕೋಟಿ ಅನುದಾನ ಮಂಜೂರಾಗಿದ್ದು ಇದರ ಶಂಕುಸ್ಥಾಪನೆ ನೆರವೇರಿಸಿ ಕಾಮಗಾರಿ ಆರಂಭಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿದ್ದಾರೆ.ನಗರ ಪಂಚಾಯತ್ ಸದಸ್ಯರಾದ ಎಂ.ವೆಂಕಪ್ಪ ಗೌಡ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಮರ್ಕಂ ಗ್ರಾಮದ ಅಭಿವೃದ್ಧಿಗೆ ಅನುದಾನ ನೀಡುವ ಕುರಿತು ಮನವಿ ನೀಡಲಾಯಿತು.ಸುಳ್ಯ ವಿಅಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಜಿ.ಕೃಷ್ಣಪ್ಪ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.









