ಕೋಲ್ಕತ್ತ: ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಮೊದಲ ಸೆಮಿಫೈನಲ್ನಲ್ಲಿ ನ್ಯೂಜಿಲೆಂಡ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ 9 ವಿಕೆಟ್ ಅಂತರದ ಸುಲಭ ಜಯ ಸಾಧಿಸಿ ಫೈನಲ್ಗೇರಿದೆ.ಕೋಲ್ಕತ್ತದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ, ನಿಗದಿತ 20 ಓವರ್ಗಳಲ್ಲಿ
8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿತ್ತು. ಈ ಮೊತ್ತ ಬೆನ್ನಟ್ಟಿದ ನ್ಯೂಜಿಲೆಂಡ್ ಬ್ಯಾಟರ್ಗಳಿಗೆ ಸವಾಲೇ ಆಗಲಿಲ್ಲ. ಆರಂಭಿಕ ಟಿಮ್ ಸೀಫರ್ಟ್ (58) ಹಾಗೂ ಫಿನ್ ಅಲೆನ್ (ಅಜೇಯ 100) ಅವರ ಅಮೋಘ ಜೊತೆಯಾಟದ ಬಲದಿಂದ 12.5 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ ಗೆಲುವಿನ ನಗೆ ಬೀರಿತು.
ಫಿನ್ ಅಲೆನ್ ಕೇವ 33 ಎಸೆತಗಳಲ್ಲಿ10 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸರ್ ನೆರವಿನಿಂದ ಅಜೇಯ 100 ರನ್ ಗಳಿಸಿದರು.ಸೀಫರ್ಟ್ 33 ಎಸೆತಗಳಲ್ಲಿ 7 ಬೌಂಡರಿ 2 ಸಿಕ್ಸರ್ ನೆರವಿನಿಂದ 58 ರನ್ ಗಳಿಸಿದರು. ಇವರು ಮೊದಲ ವಿಕೆಟ್ಗೆ 9.1 ಓವರ್ಗಳಲ್ಲಿ 117 ರನ್ ಗಳಿಸಿದರು. ಮೊದಲು ಬ್ಯಾಟ್ ಮಾಡಿದ ಆಫ್ರಿಕಾ ಪರ ಮಾರ್ಕೋ ಜಾನ್ಸನ್ ಅರ್ಧ ಶತಕ(55) ರನ್ ಗಳಿಸಿದರು. ಟಿ20 ವಿಶ್ವಕಪ್ ಕ್ರಿಕೆಟ್ನಲ್ಲಿ ನ್ಯೂಜಿಲೆಂಡ್, ಎರಡನೇ ಸಲ ಅಂತಿಮ ಹಂತಕ್ಕೇರಿದೆ. 2021ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಫೈನಲ್ನಲ್ಲಿ ಮುಗ್ಗರಿಸಿತ್ತು.









