ಧರ್ಮಶಾಲಾ: ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ತಂಡ ಭಾರತಕ್ಕೆ 274 ರನ್ಗಳ ಗೆಲುವಿನ ಗುರಿ ನೀಡಿದೆ. ಬ್ಯಾಟಿಂಗ್ ಆರಂಭಿಸಿರುವ ಭಾರತ 7 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 48 ರನ್ ಗಳಿಸಿದೆ. ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು.
ಮೊದಲು ಬ್ಯಾಟ್ ಮಾಡಿದ
ನ್ಯೂಜಿಲೆಂಡ್ 50 ಓವರ್ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 273 ರನ್ಗಳಿಸಿತು. ಡ್ಯಾರಿಯಲ್ ಮಿಚೆಲ್ 130 ರನ್ಗಳಿಸಿದರು. ರಚಿನ್ ರವೀಂದ್ರ 75 ರನ್ ಗಳಿಸಿದರು.
ಭಾರತದ ಪರ ಮೊಹಮ್ಮದ್ ಶಮಿ 5, ಕುಲದೀಪ್ ಯಾದವ್ 2 ವಿಕೆಟ್ ಪಡೆದರು.ಗಾಯಾಳು ಹಾರ್ದಿಕ್ ಪಾಂಡ್ಯ ಹಾಗೂ ಶಾರ್ದೂಲ್ ಠಾಕೂರ್ ಬದಲಿಗೆ ಮೊಹಮ್ಮದ್ ಶಮಿ ಹಾಗೂ ಸೂರ್ಯಕುಮಾರ್ ಯಾದವ್ ಆಡುತ್ತಿದ್ದಾರೆ.
ಉಭಯ ತಂಡಗಳು ಟೂರ್ನಿಯಲ್ಲಿ ಈವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿವೆ. ಅಲ್ಲದೆ ಮೊದಲೆರಡು ಸ್ಥಾನಗಳನ್ನು ಹಂಚಿಕೊಂಡಿವೆ.