ಬೆಂಗಳೂರು:ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಶ್ರೀಲಂಕಾ ತಂಡವನ್ನು ನ್ಯೂಜಿಲೆಂಡ್ 5 ವಿಕೆಟ್ಗಳಿಂದ ಮಣಿಸಿತು.ಈ ಮೂಲಕ ಕಿವೀಸ್ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿತು.
ಶ್ರೀಲಂಕಾ ವಿರುದ್ಧ ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ಮೊದಲು ಬ್ಯಾಟ್ ಮಾಡಿದ
ಶ್ರೀಲಂಕಾ 46.4 ಓವರ್ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 171 ರನ್ಗಳಿಸಿದೆ. ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 23.2 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು. ನ್ಯೂಜಿಲೆಂಡ್ ಪರ ರಚಿನ್ ರವೀಂದ್ರ 42, ಕಾನ್ವಿ 45 ರನ್ ಗಳಿಸಿದರು. ಶ್ರೀಲಂಕಾದ ಮ್ಯಾಥೂಸ್ 2 ವಿಕೆಟ್ ಪಡೆದರು.ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ಅಲ್ಪ ಮೊತ್ತಕ್ಕೆ ಕುಸಿಯಿತು. ಶ್ರೀಲಂಕಾ ಪರ ಕುಶಾಲ್ ಪೆರೆರಾ 51, ಮಹೀಶಾ ತೀಕ್ಷಣ 39 ರನ್ ಗಳಿಸಿ ಗಮನ ಸೆಳೆದರು. ಉಳಿದ ಬ್ಯಾಟರ್ಗಳು ಕಡಿಮೆ ಮೊತ್ತಕ್ಕೆ ಪೆವಿಲಿಯನ್ ಸೇರಿದರು. ನ್ಯೂಜಿಲೆಂಡ್ ಪರ ಬೌಲ್ಟ್ 3, ಲೋಕಿ, ಸಂತ್ನಾರ್, ರವೀಂದ್ರ ತಲಾ ಎರಡು ವಿಕೆಟ್ ಪಡೆದರು. ಈ ಗೆಲುವಿನೊಂದಿಗೆ ನ್ಯೂಝಿಲೆಂಡ್ ಸೆಮಿ ಫೈನಲ್ ಆಸೆ ಜೀವಂತವಾಗಿರಿಸಿತು. ರನ್ ರೇಟ್ ಉತ್ತಮಪಡಿಸುವ ನಿಟ್ಟಿನಲ್ಲಿ ನ್ಯೂಝಿಲೆಂಡ್ ಬಿರುಸಿನ ಬ್ಯಾಟಿಂಗ್ ನಡೆಸಿ ಬೇಗನೇ ಪಂದ್ಯ ಮುಗಿಸಿತು.











