ಮಂಗಳೂರು: ಬೆಂಗಳೂರು– ಮಂಗಳೂರು ರಾಷ್ಟ್ರೀಯ ಹೆದ್ದಾರಿ–75 ರಲ್ಲಿ ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಪಲೆ ಬಳಿ ಬುಧವಾರ ಸಂಜೆ ಮತ್ತೆ ಭೂಕುಸಿತವಾಗಿದ್ದು ವಾಹನ ಸಂಚಾರಕ್ಕೆ ತಡೆ ಉಂಟಾಗಿದೆ. ಕಂಟೈನರ್ ಲಾರಿ ಸೇರಿದಂತೆ ಹಲವು ವಾಹನಗಳ ಮೇಲೆ ಮಣ್ಣು ಬಿದ್ದಿರುವ ಬಗ್ಗೆ
ವರದಿಯಾಗಿದೆ.ಮಂಗಳವಾರವೂ ಮಣ್ಣು ಕುಸಿದು ವಾಹನ ಸಂಚಾರಕ್ಕೆ ತಡೆಯಾಗಿತ್ತು. ಬುಧವಾರ ಸಂಜೆ ಮಳೆ ಹೆಚ್ಚಾಗಿದ್ದರಿಂದ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತವಾಗಿದೆ. ಶಿರಾಡಿ ಘಾಟ್ ರಸ್ತೆಯಲ್ಲಿ ಮತ್ತೆ ಸಂಚಾರ ಬಂದ್ ಮಾಡಲಾಗಿದೆ. ರಸ್ತೆಯಲ್ಲಿ ನೂರಾರು ವಾಹನ ನಿಂತುಕೊಂಡಿವೆ.ಬುಧವಾರ ಬೆಳಿಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು.