ಮಂಗಳೂರು: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ- ನೇರಳಕಟ್ಟೆ ಎಂಬಲ್ಲಿ ರಸ್ತೆಗೆ ಮರ ಬಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾದ ಘಟನೆ ನಡೆದಿದೆ. ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಇಲಾಖೆ ಸಿಬ್ಬಂದಿಗಳು ತೆರವು ಕಾರ್ಯಾಚರಣೆ ನಡೆಸಿ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ಮರ ಬಿದ್ದ ಕಾರಣ ಕೆಲ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.