ಮಂಗಳೂರು:ಸುರತ್ಕಲ್ ನಿಂದ ಬಿ.ಸಿ.ರೋಡ್ ವರೆಗಿನ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ, ಮರು ಡಾಂಬರೀಕರಣ ಹಾಗೂ ಸುರಕ್ಷತಾ ವ್ಯವಸ್ಥೆ ಅಳವಡಿಕೆ, ರಸ್ತೆ ಇಕ್ಕೆಲಗಳ ಸ್ವಚ್ಛತಾ ಕಾರ್ಯ ಸಂಬಂಧಪಟ್ಟ ಕಾಮಗಾರಿಗಳಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಚಾಲನೆ ನೀಡಿದರು.ಸುರತ್ಕಲ್ನ ಗೋವಿಂದದಾಸ್ ಕಾಲೇಜಿನ ಸಮೀಪದ ಹೆದ್ದಾರಿ ಬಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಮಗಾರಿಗಳ
ಚಾಲನೆ ನೆರವೇರಿಸಿ ಮಾತನಾಡಿದ ಕ್ಯಾ. ಚೌಟ, ” ದೇಶದ ಪ್ರಮುಖ ಬಂದರು ರಸ್ತೆಗಳಲ್ಲಿ ಒಂದಾಗಿರುವ ಸುರತ್ಕಲ್ನಿಂದ ಬಿಸಿ. ರೋಡ್ ರವರೆಗಿನ ಈ ಮಾರ್ಗದ ನವೀಕರಣ ಸೇರಿ ಇತರ ಕಾಮಗಾರಿಗಳಿಗೆ ಇದೀಗ ಚಾಲನೆ ದೊರೆತಿದೆ. ಮಳೆಗಾಲಕ್ಕೂ ಮೊದಲು ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ನಿರ್ದೇಶನ ನೀಡಲಾಗಿದೆ.ಈ ಹೆದ್ದಾರಿ ಕಾಮಗಾರಿಯನ್ನು ಮುಗ್ರೋಡಿ ಕನ್ಸ್ಟಕ್ಷಷನ್ ನಡೆಸಲಿದ್ದು, ಸುರತ್ಕಲ್-ನಂತೂರು, ಬಿಸಿ.ರೋಡ್-ಪಡೀಲ್ ಹಾಗೂ ನಂತೂರು ಜಂಕ್ಷನ್ನಿಂದ ಪಡೀಲ್ವರೆಗಿನ ಬೈಪಾಸ್ ರಸ್ತೆ ಸೇರಿದಂತೆ ಒಟ್ಟು 37.42 ಕಿಮೀ. ದೂರದ ಹೆದ್ದಾರಿಗಳ ರಿಪೇರಿ, ಮರುಡಾಂಬರೀಕರಣ ಹಾಗೂ ನಿರ್ವಹಣೆ ಕೆಲಸಗಳು ಒಟ್ಟು 28.58 ಕೋಟಿ ರೂ. ವೆಚ್ಚದಲ್ಲಿ ನಡೆಯಲಿವೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿ ವೈ, ಮಾಜಿ ಸಚಿವ ನಾಗರಾಜ್ ಶೆಟ್ಟಿ, ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್, ಜಯಾನಂದ್ ಅಂಚನ್, ಮನೋಜ್ ಕುಮಾರ್ ಎನ್ಎಚ್ಎಐ ಅಧಿಕಾರಿಗಳು ಮುಗ್ರೋಡಿ ಕನ್ಸ್ಟಕ್ಷಷನ್ ಸುಧಾಕರ್ ಶೆಟ್ಟಿ, ಬಿಜೆಪಿ ಮುಖಂಡರು, ಮಾಜಿ ಮ.ನ.ಪಾ ಸದಸ್ಯರುಗಳು, ಸ್ಥಳೀಯರು, ನಾಗರಿಕ ಹೋರಾಟ ಸಮಿತಿ ಸದಸ್ಯರು ಹಾಜರಿದ್ದರು. ತಿಲಕ್ರಾಜ್ ಕೃಷ್ಣಾಪುರ ಕಾರ್ಯಕ್ರಮ ನಿರೂಪಿಸಿದರು.