ಬೆಳಗಾವಿ: ‘ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸುವಂತೆ ಗ್ರೀನ್ ಕಾರಿಡಾರ್ ನಿರ್ಮಿಸುವುದು ನಮ್ಮ ಆದ್ಯತೆ. ಇಂಥ ಹೆದ್ದಾರಿಗಳು ಪ್ರಯಾಣದ ಸಮಯ, ವೆಚ್ಚ ಕಡಿಮೆ ಆಗುವುದಲ್ಲದೇ ಅಭಿವೃದ್ಧಿಗೆ ಪೂರಕವಾಗಿವೆ’ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದರು. ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಉದ್ಘಾಟನೆ
ಹಾಗೂ 18 ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ 8,200 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿ ಇದೆ. ಇದನ್ನು 3 ಲಕ್ಷ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ. ಈಗಾಗಲೇ ಶೇ 90ರಷ್ಟು ಕಾಮಗಾರಿಗಳು ಮುಗಿದಿವೆ’ ಎಂದರು.ಸಚಿವ ಸತೀಶ ಜಾರಕಿಹೊಳಿ, ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಮಂಗಲಾ ಅಂಗಡಿ, ಪಿ.ಸಿ.ಗದ್ದಿಗೌಡರ, ಸಂಗಣ್ಣ ಕರಡಿ, ರಾಜಾ ಅಮರೇಶ್ವರ ನಾಯಕ, ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಅಭಯ್ ಪಾಟೀಲ, ವಿಠ್ಠಲ ಹಲಗೇಕರ, ನವದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ್ ಹುಕ್ಕೇರಿ ಹಲವರು ವೇದಿಕೆ ಮೇಲಿದ್ದರು.