ಸುಳ್ಯ: ಮಾಣಿ-ಮೈಸೂರು ರಾಷ್ಟೀಯ ಹೆದ್ದಾರಿಯ ಕಲ್ಲುಗುಂಡಿಯಲ್ಲಿ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದಿರುವ ಘಟನೆ ವರದಿಯಾಗಿದೆ. ಭಾರೀ ಮಳೆಗೆ ಕಲ್ಲುಗುಂಡಿಯಲ್ಲಿ ಮರ ಬಿದ್ದು ತಡೆ ಉಂಟಾಗಿದ್ದು ವಾಹನ ಸಂಚಾರಕ್ಕಡ ತಡೆ ಉಂಟಾಗಿದೆ ಎಂದು ತಿಳಿದು ಬಂದಿದೆ.ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ.ಹಮೀದ್, ಸದಸ್ಯ ಎಸ್.ಕೆ.ಹನೀಫ್, ಪೊಲೀಸ್, ಅರಣ್ಯ, ಗೃಹ ರಕ್ಷಕ ದಳ, ಧರ್ಮಸ್ಥಳ ಶೌರ್ಯ ವಿಪತ್ತು ತಂಡದ ಸದಸ್ಯರು, ಹಾಗೂ ಸ್ಥಳೀಯ ಯುವಕರು ಸೇರಿ ಮರದ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.
.