ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬುಧವಾರ ಬೆಳಿಗ್ಗೆ ದಾಳಿ ಮಾಡಿ ಪರಿಶೀಲನೆ ನಡೆಸಿದೆ ಎಂದು ವರದಿಯಾಗಿದೆ.ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ತಾಲೂಕಿನ ವಿವಿಧೆಡೆ ಸೇರಿ 16 ಕಡೆಗಳಲ್ಲಿ ಎನ್ಐಎ ಕಾರ್ಯಾಚರಣೆ ನಡೆಸಿದೆ. ಮನೆ, ಕಚೇರಿಗಳ ಮೇಲೆ ದಾಳಿ
ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಭಯೋತ್ಪಾದಕ ಕೃತ್ಯಕ್ಕೆ ಹವಾಲಾ ಹಣ ಬಳಕೆ ಕುರಿತ ತನಿಖೆಯ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದ ಸಂದರ್ಭದಲ್ಲಿ ದುಷ್ಕೃತ್ಯ ನಡೆಸಲು ಸಂಚು ರೂಪಿಸಿದ ಘಟನೆಯ ತನಿಖೆಯ ಹಿನ್ನಲೆಯಲ್ಲಿ ಮತ್ತು ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಹವಾಲ ಹಣ ಬಳಕೆ ಪ್ರಕರಣದ ತನಿಖೆಯ ಜಾಡು ಹಿಡಿದು ದಕ್ಷಿಣ ಕನ್ನಡ ಜಿಲ್ಲೆಗೆ ಬಂದಿದ್ದ ಎನ್ಐಎ ಅಧಿಕಾರಿಗಳು, ಇತ್ತೀಚೆಗೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಮತ್ತು ಪುತ್ತೂರಿನಲ್ಲಿ ದಾಳಿ ನಡೆಸಿ ಕೆಲವರನ್ನು ವಶಕ್ಕೆ ಪಡೆದಿದ್ದರು.