ಮಂಗಳೂರು: ಕೇರಳದಲ್ಲಿ ನಿಫಾ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುದರ್ಶನ್ ಹೇಳಿದ್ದಾರೆ.
ತನ್ನ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು
ನಿಫಾ ಹಿನ್ನಲೆಯಲ್ಲಿ ಜಿಲ್ಲೆಯ ಗಡಿ ಪ್ರದೇಶದಲ್ಲಿ ವಿಶೇಷ ನಿಗಾ ವಹಿಸಲಾಗಿದೆ. ಜಿಲ್ಲೆಯಲ್ಲಿ ಜ್ವರ ಸಮೀಕ್ಷೆ ನಡೆಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೂಚನೆ ನೀಡಲಾಗಿದೆ. ವೆನ್ಲಾಕ್ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ನಿಫಾ ಐಸೋಲೇಶನ್ ವಾರ್ಡ್ ಮೀಸಲಿಡಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ನವೀನ್ ಚಂದ್ರ ಕುಲಾಲ್ ಉಪಸ್ಥಿತರಿದ್ದರು.